ಭೀಕರ ರಸ್ತೆ ಅಪಘಾತ: 7 ಮಂದಿಯ ದುರ್ಮರಣ, 25ಕ್ಕೂ ಹೆಚ್ಚು ಜನರಿಗೆ ಗಾಯ

ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರ್‌ಪುರ ಪಟ್ಟಣದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Written by - Puttaraj K Alur | Last Updated : Aug 20, 2022, 06:41 AM IST
  • ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರ್‌ಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ
  • ಘಟನೆಯಲ್ಲಿ 7 ಮಂದಿ ದುರ್ಮರಣ, 25ಕ್ಕೂ ಹೆಚ್ಚು ಜನರಿಗೆ ಗಾಯ
  • ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿಯವರ ಕಾರ್ಯಾಲಯ
ಭೀಕರ ರಸ್ತೆ ಅಪಘಾತ: 7 ಮಂದಿಯ ದುರ್ಮರಣ, 25ಕ್ಕೂ ಹೆಚ್ಚು ಜನರಿಗೆ ಗಾಯ title=
ಭೀಕರ ರಸ್ತೆ ಅಪಘಾತಕ್ಕೆ 7 ಬಲಿ

ಪಾಲಿ(ರಾಜಸ್ಥಾನ): ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರ್‌ಪುರ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಎರಡು ಭಾರೀ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಿವಪುರ ಮತ್ತು ಸುಮೇರ್‌ಪುರದ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಗೊಂಡವರು ಪಶ್ಚಿಮ ರಾಜಸ್ಥಾನದ ಸ್ಥಳೀಯ ರಾಮದೇವರ ದೇವಸ್ಥಾನಕ್ಕೆಂದು ಪ್ರಯಾಣಿಸುತ್ತಿದ್ದರು.

ಇದನ್ನೂ ಓದಿ: Viral Wedding Card: ಮದುವೆಯ ಮಮತೆಯ ಈ ಕರೆಯೋಲೆಯಲ್ಲಿನ ಕ್ರಿಯೇಟಿವಿಟಿ ಕಂಡು ದಂಗಾದ ಅತಿಥಿಗಳು

ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಪ್ರಧಾನಿ ಮೋದಿಯವರ ಟ್ವೀಟ್‌ನಲ್ಲಿ, ‘ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಎಂದು ನಾನು ಪ್ರಾರ್ಥಿಸುತ್ತೇನೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಈಗ ಪುರುಷರಿಗಿಂತ ಮಹಿಳೆಯರಿಗಿದ್ದಾರೆ ಹೆಚ್ಚು ಸೆಕ್ಸ್ ಪಾಲುದಾರರು..!

ಏತನ್ಮಧ್ಯೆ ಘಟನೆಯ ಬಗ್ಗೆ ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜೈಸಲ್ಮೇರ್‌ನ ರಾಮದೇವ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಕೆಲವು ವಿಶೇಷ ವ್ಯವಸ್ಥೆಗಳನ್ನು ಮಾಡುವಂತೆ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಉಪಾಧ್ಯಕ್ಷ ಜಗದೀಪ್ ಧಂಖರ್ ಸಹ ಟ್ವೀಟ್ ಮಾಡಿದ್ದು, ಪಾಲಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News