ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ಅಟ್ಟಾಡಿಸಿ ಇಟ್ಟಂಗಿಯಿಂದ ಹಲ್ಲೆ ಮಾಡಲಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಹಿಂಭಾಗ ಈ  ಘಟನೆ ನಡೆದಿದೆ. ವ್ಯಕ್ತಿಯೊಬ್ಬನ ಕುಟುಂಬಸ್ಥರು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಗಂಡನ ಜೊತೆ ಈ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಬ್ಯಕ್ತಿಯ ಹೆಂಡತಿ ಮತ್ತು ಮಕ್ಕಳು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. 


ಈ ಮಹಿಳೆ ತನ್ನ ಪತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್ ನಲ್ಲಿ ಆಯಾ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.  


ಇದನ್ನೂ ಓದಿ : ಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ & ಗ್ಯಾಂಗ್ ವಿರುದ್ದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ 


ಕೆಲಸ ಮುಗಿಸಿ ಮಹಿಳೆ ಮನೆಗೆ ಹೋಗುತ್ತಿದ್ದಾಗ ವ್ಯಕ್ತಿಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಮಹಿಳೆ ಮೇಲೆ ಕುಟುಂಬಸ್ಥರೊಂದಿಗೆ ವ್ಯಕ್ತಿ ಸಹ ಹಲ್ಲೆ ಮಾಡಿದ್ದಾನೆ. ಕಳೆದ ಹತ್ತು ವರ್ಷಗಳಿಂದ ಇಬ್ಬರ ನಡುವೆ ಅನೈತಿಕ ಸಂಬಂಧ ಇತ್ತು ಎಂಬ ಆರೋಪ ಕೇಳಿ ಬಂದಿದೆ. 


ಹಲ್ಲೆಗೊಳಗಾದ ತಂಗಿಯನ್ನು ಬಿಡಿಸಲು ಬಂದ ಅಕ್ಕನನ್ನೂ ಥಳಿಸಿದ್ದಾರೆ. ಇಬ್ಬರನ್ನೂ ಸಾರ್ವಜನಿಕ ಸ್ಥಳದಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಚಪ್ಪಲಿ ಹಾಗೂ ಇಟ್ಟಂಗಿಯಿಂದ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 


ಇದನ್ನೂ ಓದಿ : ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.