ಬಟ್ಟೆ ಅಂಗಡಿಗೆ ನುಗ್ಗಿ ಚಾಕು ತೋರಿಸಿ ಸುಲಿಗೆಗೆ ಯತ್ನ: ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಜನ

Theft in Bangalore: ಸಿಟಿ‌ ಮಾರ್ಕೆಟ್ ಠಾಣಾ ವ್ಯಾಪ್ತಿಯ ಮಾಮೂಲ್ ಪೇಟೆಯಲ್ಲಿ ಬಟ್ಟೆ ಅಂಗಡಿಗೆ ನುಗ್ಗಿ ಸುಲಿಗೆಗೆ ಯತ್ನಿಸಿದ ಇಬ್ಬರಲ್ಲಿ ಒಬ್ಬ ಕಳ್ಳನನ್ನು ಬಂಧಿಸಲಾಗಿದೆ.   

Written by - VISHWANATH HARIHARA | Edited by - Zee Kannada News Desk | Last Updated : Jul 1, 2023, 03:04 PM IST
  • ಬಟ್ಟೆ ಅಂಗಡಿಗೆ ನುಗ್ಗಿ ಸುಲಿಗೆಗೆ ಯತ್ನ
  • ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಜನ
  • ಸಿಟಿ‌ ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಬಟ್ಟೆ ಅಂಗಡಿಗೆ ನುಗ್ಗಿ ಚಾಕು ತೋರಿಸಿ ಸುಲಿಗೆಗೆ ಯತ್ನ: ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಜನ title=

ಬೆಂಗಳೂರು: ಬಟ್ಟೆ ಅಂಗಡಿಗೆ ನುಗ್ಗಿ ಸುಲಿಗೆಗೆ ಯತ್ನಿಸಿದ ಇಬ್ಬರು ಖದೀಮರ ಪೈಕಿ ಒಬ್ಬನನ್ನು ಸಾರ್ವಜನಿಕರು ಹಿಡಿದು‌ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಿಟಿ‌ ಮಾರ್ಕೆಟ್ ಠಾಣಾ ವ್ಯಾಪ್ತಿಯ ಮಾಮೂಲ್ ಪೇಟೆಯಲ್ಲಿ ಈ ಘಟನೆ ನಡೆದಿದ್ದು,ಸೈಯದ್ ಅಯಾಸ್ ಚೌದ್ರಿ,ಸದ್ದಾಂ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ. 

ಜಲರಾಮ್ ಎಂಬುವವರು ಹೊಸದಾಗಿ 2 ತಿಂಗಳ ಹಿಂದೆ ಬಟ್ಟೆ ಅಂಗಡಿ ತೆರೆದಿದ್ದರು. ಕಳೆದ ತಿಂಗಳು 21 ರಂದು ಸಂಜೆ 7.30 ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಆರೋಪಿ ಸೈಯಾದ್ ಅಯಾಜ್ ಬಂದಿದ್ದ. ವ್ಯಾಪಾರ ನಡೆಯುತ್ತಿದ್ದ ಸಮಯದಲ್ಲಿ ಗಲ್ಲಾಪೆಟ್ಟಿಗೆಗೆ ಕೈಹಾಕಿ 8 ಸಾವಿರ ನಗದು ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪ್ರತಿರೋಧ ಒಡ್ಡಲು ಯತ್ನಿಸಿದ ಜಲರಾಮ್ ಗೆ ಚಾಕು ತೋರಿಸಿ ಬೆದರಿಸಿ ಯಾರ ಬಳಿಯಾದ್ರೂ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ.‌

ಇದನ್ನೂ ಓದಿ: ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿತ: ರೈತರಲ್ಲಿ ಮೂಡಿದ ಆತಂಕ

ಇದೇ ವೇಳೆ ಸ್ಥಳಕ್ಕೆ ಬಂದ ಮತ್ತೊಬ್ಬ ಕಳ್ಳ ಸದ್ದಾಂ ಖಾನ್ ಎಂಟ್ರಿ ಕೊಟ್ಟು ಜಲರಾಮ್ ಗೆ ಥಳಿಸಲು ಮುಂದಾಗಿ ಇಬ್ಬರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಜಲರಾಮ್ ಕೂಗಾಟ ಕೇಳಿದ ಅಕ್ಕಪಕ್ಕದ ಅಂಗಡಿಯವರು, ಸಾರ್ವಜನಿಕರು ಸೇರಿ ಅಯಾಜ್ ನನ್ನು ಹಿಡಿದು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. 

ತಕ್ಷಣವೇ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಲಾಗಿ ಸ್ಥಳಕ್ಕೆ ಬಂದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎಸ್ಕೇಪ್ ಆಗುತ್ತಿದ್ದ ಸದ್ದಾಂ ಖಾನ್ ನನ್ನು ಬಂಧಿಸಿದ್ದಾರೆ. ಸದ್ಯ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳು ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್’ನಿಂದ ಬಿಜೆಪಿಗೆ ವಲಸೆ ಬಂದವರ ವಿರುದ್ಧ ಒಂದು ಪದವನ್ನೂ ಬಳಸಿಲ್ಲ: ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News