ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆಗೆ ಯತ್ನಿಸಿದ ಆರೋಪದಡಿ ಬಿಬಿಎಂಪಿಯ ಪ್ರಥಮ ದರ್ಜೆ ಸಹಾಯಕ ಸೇರಿ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಆರ್.ಆರ್.ನಗರದ ಬಿಬಿಎಂಪಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ನವೀನ್,  ಜನಾರ್ದನ್, ನಾರಾಯಣಸ್ವಾಮಿ, ಎಂ.ಎಸ್.ಪ್ರಸಾದ್ ಹಾಗೂ ಎಂ.ಎಸ್.ದಿವ್ಯಾ ಬಂಧಿತರು.


ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ


ಪಟ್ಟಣಗೆರೆ ಗ್ರಾಮದ ರಾಮಕೃಷ್ಣಯ್ಯ ಎಂಬುವರು 40 ಕೋಟಿ ರೂ. ಮೌಲ್ಯದ 3 ಎಕರೆ ಜಮೀನು ಹೊಂದಿದ್ದು, ರಿಯಲ್ ಎಸ್ಟೇಟ್ ಸಂಸ್ಥೆಯೊಂದಕ್ಕೆ ಸಂಬಂಧಿಸಿದ ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮ ಪ್ರವೇಶ ಮಾಡಿದ್ದರು.


ನಕಲಿ ಭೂ ದಾಖಲೆ, ಜಮೀನು ಮಾಲಿಕನ ನಕಲಿ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ ವಂಚಿಸಲಾಗಿದೆ ಎಂದು ರಾಮಕೃಷ್ಣಯ್ಯ ಎಂಬುವವರು ದೂರು ನೀಡಿದ್ದರು. ಅವರ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಠಾಣಾ ಪೊಲೀಸರು‌ ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಚೆಲುವರಾಯಸ್ವಾಮಿ ಓರ್ವ ರಾಜಕೀಯ ಶಕುನಿ!: ಶಾಸಕ ಸುರೇಶ್‌ ಗೌಡ ಕಿಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.