Meghalaya Mob Lynching Horror: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರನ್ನು ಜನರೇ ಹೊಡೆದು ಕೊಂದಿರುವ ಘಟನೆ ನಡೆದಿದೆ. ಮೇಘಾಲಯದ ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಇಬ್ಬರು ದುಷ್ಕರ್ಮಿಗಳು ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದರೆಂದು ಆರೋಪಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಾಲಕಿಯ ಕಿರುಚಾಟವನ್ನು ಕೇಳಿದ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಊರಿನವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ನೂರಕ್ಕೂ ಹೆಚ್ಚು ಮಂದಿ ಇಬ್ಬರನ್ನು ಮನಬಂದಂತೆ ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.


ಇದನ್ನೂ ಓದಿ: Lok Sabha Polls 2024 3rd Phase : ಮೂರನೇ ಹಂತದ ಚುನಾವಣೆಗೆ ಕೌಂಟ್‌ಡೌನ್.. ಅಮಿತ್ ಶಾ ಸೇರಿದಂತೆ ಕಣದಲ್ಲಿರುವ ಘಟಾನುಘಟಿಗಳು ಇವರು


ಇಬ್ಬರ ಪೈಕಿ ತಿರೋತ್‌ ಸಿಂಗ್‌ ಎಂಬಾತ ಸಿವಿಲ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಇನ್ನೊಬ್ಬ ಶಿಲ್ಲಾಂಗ್‌ ಸಿವಿಲ್‌ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 


ಈ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪುಟ್ಟ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ದುರುಳರನ್ನು ಜನರೇ ಹೊಡೆದು ಕೊಂದಿರುವುದು ಸರಿಯಾಗಿದೆ ಅಂತಾ ನೆಟಿಜನ್ಸ್‌ ಹೇಳಿದ್ದಾರೆ. ಅಪರಾಧಿಗಳಿಗೆ ಜನರೇ ತಕ್ಕ ಶಿಕ್ಷೆ ನೀಡಿರುವುದು ಅತ್ಯಾಚಾರಿಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದಂತಾಗಿದೆ ಅಂತಾ ಹೇಳಿದ್ದಾರೆ. 


ಇದನ್ನೂ ಓದಿ: ಮಾಡೆಲ್‌ ಮೀರಿಸುವ ಸೌಂದರ್ಯ; ಕೋಚಿಂಗ್‌ ಇಲ್ಲದೆ ಮೊದಲ ಪ್ರಯತ್ನದಲ್ಲೇ UPSCಯಲ್ಲಿ ಸಕ್ಸಸ್!‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.