Road accident: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳು ಸಾವು

Road accident: ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

Written by - Chetana Devarmani | Last Updated : Aug 3, 2024, 08:59 AM IST
    • ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ
    • ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
    • ಮೃತರು ಪ್ರಸಿದ್ಧ ಯೂನಿವರ್ಸಿಟಿಯ ವಿದ್ಯಾರ್ಥಿಗಳು
Road accident: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳು ಸಾವು title=

ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಕೋಲಾರದ ‌ಹೊರವಲಯದಲ್ಲಿ ಈ ದುರ್ಘಟನೆ ಜರುಗಿದೆ.

ಕೋಲಾರದ ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರ ಬಳಿ ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಸಿದ್ಧ ಯೂನಿವರ್ಸಿಟಿಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. 

ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಈ ಅಪಘಾತದಲ್ಲಿ ಅಸುನೀಗಿದ್ದಾರೆ. ಬಂಗಾರಪೇಟೆಯ ಸಾಯಿ ಗಗನ್ ಅಪಾಯದಿಂದ ಪಾರಾಗಿದ್ದಾರೆ. 

ಈ ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ: ರಾಯಚೂರು: ಚಲಿಸುತ್ತಿದ್ದ ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News