ಬೆಂಗಳೂರು : ಟೆಲಿಗ್ರಾಂನಲ್ಲಿ ಪರಿಚಯವಾದ ಮಹಿಳೆಯ ನಂಬಿ ಹೋದ ಉದ್ಯಮಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಕೊನೆಗೆ ಪರಾರಿಯಾಗಿದ್ದಾನೆ. ಸದ್ಯ ಈ ಸಂಬಂಧ ಆತನೇ ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 27 ವರ್ಷದ ಉದ್ಯಮಿಯೊಬ್ಬರ ನೀಡಿರುವ ದೂರಿನನ್ವಯ ಮೆಹರ್ ಹೆಸರಿನ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಉದ್ಯಮಿಗೆ ಟೆಲಿಗ್ರಾಂ ಮೂಲಕ ಮಹಿಳೆಯ ಪರಿಚಯವಾಗಿದ್ದು, ನಂತರ ಪರಸ್ಪರ ವಾಟ್ಸ್ಯಾಪ್ ಚಾಟಿಂಗ್ ಮಾಡುತ್ತಿದ್ದರು. ನನ್ನ ಗಂಡ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಲೈಂಗಿಕ ತೃಪ್ತಿಗಾಗಿ ಸಂಗಾತಿಯ ಹುಡುಕಾಟದಲ್ಲಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಳು. ಮಾರ್ಚ್ 3ರಂದು ತನ್ನ ಫೋಟೋ ಮತ್ತು ಲೊಕೇಶನ್ ಕಳುಹಿಸಿ ಉದ್ಯಮಿಯನ್ನು ಜೆ.ಪಿ.ನಗರ 5ನೇ ಹಂತದಲ್ಲಿರುವ ಅಮಿನಾಮಂಜಿಲ್ ಹೆಸರಿನ ಕಟ್ಟಡಕ್ಕೆ ಕರೆಸಿಕೊಂಡಿದ್ದಳು.
ಇದನ್ನೂ ಓದಿ: ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ ...!
ಬಳಿಕ ಬೆಡ್ ರೂಮಿನಲ್ಲಿ ದೂರುದಾರ ವ್ಯಕ್ತಿ ಕುಳಿತಿದ್ದಾಗ ಏಕಾಏಕಿ ಬಂದ ಮೂವರು ಯುವಕರು 'ಯಾರು ನೀನು? ಯಾಕೆ ಬಂದಿದ್ದೀಯಾ' ಎಂದು ಉದ್ಯಮಿಯ ಮುಖಕ್ಕೆ ಗುದ್ದಿ ಹಲ್ಲೆ ಮಾಡಿದ್ದಾರೆ. ಬಳಿಕ ನಿನ್ನನ್ನ ಬೆತ್ತಲೆಗೊಳಿಸಿ ರಸ್ತೆಯಲ್ಲಿ ಓಡಾಡಿಸುತ್ತೇವೆ. ಮಸೀದಿಗೆ ಕರೆದೊಯ್ದು ಮುಂಜಿ ಮಾಡಿಸಿ ಮೆಹರ್ ಳೊಂದಿಗೆ ಮದುವೆ ಮಾಡಿಸುತ್ತೇವೆ. ಮೂರು ಲಕ್ಷ ರೂ ಕೊಟ್ಟರೆ ಬಿಟ್ಟು ಕಳಿಸುತ್ತೇವೆ ಎಂದು ಬೆದರಿದ್ದಾರೆ. ಬಳಿಕ ಉದ್ಯಮಿಯ ಮೊಬೈಲ್ ನಿಂದ 21,500/- ರೂಪಾಯಿ ಫೋನ್ ಪೇ ಮಾಡಿಸಿಕೊಂಡಿದ್ದಾರೆ.
ರಾತ್ರಿ 8ರವರೆಗೂ ತಮ್ಮ ಜೊತೆಯಲ್ಲಿರಿಸಿಕೊಂಡು ಬಳಿಕ ಕ್ರೆಡಿಟ್ ಕಾರ್ಡ್ ಇದ್ದರೆ 2.5 ಲಕ್ಷ ವರ್ಗಾಯಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಆದರೆ ಕ್ರೆಡಿಟ್ ಕಾರ್ಡ್ ಮನೆಯಲ್ಲಿದೆ ಎಂದು ಹೇಳಿದಾಗ ಆರೋಪಿಗಳು ಕ್ರೆಡಿಟ್ ಕಾರ್ಡ್ ತೆಗೆದುಕೊಂಡು ಬರೋಣ ಎಂದು ಹೊರಗಡೆ ಕರೆತಂದಾಗ ಉದ್ಯಮಿ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಬಳಿಕ ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದು, ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.