ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಪುನರ್ ಪರಿಶೀಲನೆ ವಿಚಾರ: ನೋ ಕಾಮೆಂಟ್ಸ್ ಎಂದ ನಗರ ಪೊಲೀಸ್ ಆಯುಕ್ತರು
DJ Halli KG Halli riot case : ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಕಚೇರಿಯಲ್ಲಿ ನಡೆದ ಸೇವಾ ಕವಾಯತು ಗೌರವ ಸ್ವೀಕರಿಸಿದ ಬಳಿಕ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿದರು.
ಬೆಂಗಳೂರು : 2021 ರಲ್ಲಿ ನಡೆದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಆರೋಪಿಗಳ ಪ್ರಕರಣ ಪುನರ್ ಪರಿಶೀಲನೆ ಕುರಿತಂತೆ ಶಾಸಕ ತನ್ವೀರ್ ಸೇಠ್ ಪತ್ರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೇ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದೆ ಪ್ರಶ್ನೆಗೆ ನೋ ಕಾಮೆಂಟ್ಸ್ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉತ್ತರಿಸಿದ್ದಾರೆ.
ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಕಚೇರಿಯಲ್ಲಿ ನಡೆದ ಸೇವಾ ಕವಾಯತು ಗೌರವ ಸ್ವೀಕರಿಸಿದ ಬಳಿಕ ಅವರು ಪ್ರತಿಕ್ರಿಯಿಸಿ, ನಗರದಲ್ಲಿ ಅಪರಾಧ ಪ್ರಕರಣಗಳ ಕುರಿತು ಮಾತನಾಡಿದ ಬಿ.ದಯಾನಂದ್ ಅಂಕಿ ಅಂಶಗಳನ್ನ ನೋಡಿದಾಗ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ ಎಂದರು.
ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ: ರಾಡ್‍ನಿಂದ ಹೊಡೆದು ಬಾಲಕಿಯ ಹತ್ಯೆ..!
ಲೋಕ ಸ್ಪಂದನ ಯೋಜನೆ ಬಗ್ಗೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಡಿಸಿಪಿ, ಎಸಿಪಿಗಳು ಖುದ್ದಾಗಿ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಪಾಸ್‌ಪೋರ್ಟ್ ವಿಚಾರಕ್ಕೆ ಐದು ನೂರು ರೂಪಾಯಿ ಲಂಚ ಪಡೆದಿದ್ದ ಪೊಲೀಸ್ ಸಿಬ್ಬಂದಿ ಬಗ್ಗೆ ಲೋಕಸ್ಪಂದನದಲ್ಲಿ ದೂರು ದಾಖಲಾಗಿತ್ತು. ಆ ಸಿಬ್ಬಂದಿಯನ್ನ ಅಮಾನತ್ತು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಾದಕ ಸರಬರಾಜು ಪ್ರಕರಣಗಳ ಕುರಿತು ಮಾತನಾಡುತ್ತಾ, ' ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿದ್ದೇವೆ. ಕಾಲೇಜು ಬಳಿ ಪೊಲೀಸರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕ ಸರಬರಾಜಲ್ಲಿ ತೊಡಗಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Crime News: ಸಾಲ ತೀರಿಸಿಲ್ಲ ಎಂದು ಗಂಡನ ಎದುರೇ ಪತ್ನಿ ಮೇಲೆ ಅತ್ಯಾಚಾರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.