Basavaraj Horatti car accident : ಬಸವರಾಜ​ ಹೊರಟ್ಟಿ ಕಾರು ಅಪಘಾತ : ಗಾಯಗೊಂಡ ಬೈಕ್ ಸವಾರ

Basavaraj Horatti car accident : ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 

Written by - Chetana Devarmani | Last Updated : Aug 7, 2022, 04:51 PM IST
  • ಬಸವರಾಜ​ ಹೊರಟ್ಟಿ ಕಾರು ಅಪಘಾತ
  • ಗಾಯಗೊಂಡ ಬೈಕ್ ಸವಾರ
  • ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ
Basavaraj Horatti car accident : ಬಸವರಾಜ​ ಹೊರಟ್ಟಿ ಕಾರು ಅಪಘಾತ : ಗಾಯಗೊಂಡ ಬೈಕ್ ಸವಾರ title=
ಕಾರು ಅಪಘಾತ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪತ್ರಕರ್ತರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಹೊರಟ್ಟಿ ಅವರು ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡುಮರಳುತ್ತಿದ್ದಾಗ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿಯವರ ಕಾರು ಎದುರಿಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. 

ಇದನ್ನೂ ಓದಿ: Mangalore : ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟ್‌ ಅವಘಡ

ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್​​ನಲ್ಲಿ ಈ ಅಪಘಾತ ಸಂಭವಿಸಿದೆ. ಸವದತ್ತಿ ‌ಮೂಲದ ಕೆಂಚಪ್ಪ ಎಂಬ ಬೈಕ್‌ ಸವಾರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಘಟನಾ ಸ್ಥಳಕ್ಕೆ ಬಾರದ ಆ್ಯಂಬುಲೆನ್ಸ್ : 

ಗಾಯಗೊಂಡ ಬೈಕ್‌ ಸವಾರನನ್ನು ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಈ ವೇಳೆ ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಬಂದಿರಲಿಲ್ಲ. ಘಟನೆ ನಡೆದ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ ಅವರು, ನಂತರ ಅಲ್ಲಿಂದ ಬೇರೆ ವಾಹನ ತರಿಸಿ ಹೊರಟು ಹೋದರು. ಬಳಿಕ ಗಾಯಾಳುವನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: BSF Soldier : ಬೀದರ್ ಮೂಲದ ಬಿಎಸ್ಎಫ್ ಯೋಧ ಸಾವು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News