Shocking News: BBMP ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ದುರ್ಮರಣ!!
BBMP Lorry Accident: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಹೋದರಿಯರು ಎಡಬದಿಯಿಂದ ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸವಾರರ ಮೇಲೆ ಹರಿದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Bengaluru Shocking News: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದಲ್ಲಿ ಶನಿವಾರ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ್ (30), ನಾಜಿಯಾ ಇರ್ಫಾನ್ (32) ಮೃತ ಸಹೋದರಿಯರು.
ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ಮಧ್ಯಾಹ್ನ 12:20ರ ವೇಳೆಗೆ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ ಕಸದ ಲಾರಿ ತೆರಳುತ್ತಿತ್ತು. ಈ ವೇಳೆ ಬೈಕ್ನಲ್ಲಿ ಬಂದಿದ್ದ ಮಹಿಳೆಯರು ಕಸದ ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಮುಂದಾಗಿದ್ದರಂತೆ. ಇದೇ ವೇಳೆ ಎದುರಿಗೆ ಬೈಕ್ವೊಂದು ಬಂದಿದೆ.
ಇದನ್ನೂ ಓದಿ: ಹೊಸ ಚರ್ಚೆಗೆ ಗ್ರಾಸವಾದ ಕಾಂಗ್ರೆಸ್ ಡಿನ್ನರ್ ಪಾಲಿಟಿಕ್ಸ್
ಬೈಕ್ನಿಂದ ತಪ್ಪಿಸಿಕೊಳ್ಳುವ ಬರದಲ್ಲಿ ಗಾಡಿಯನ್ನು ಬಲಕ್ಕೆ ತಿರುಗಿದ್ದಾರೆ. ಪಕ್ಕದಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಕೆಳಗೆ ಸಿಲುಕಿ ಮಹಿಳೆಯರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹೆಣ್ಣೂರು ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಬೆನ್ನಲ್ಲೇ ಹೆಣ್ಣೂರು ಸಂಚಾರಿ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಬಸ್‌ಪ್ರಯಾಣ ದರ 15% ಏರಿಕೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.