Bengaluru: PUCಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!
Bengaluru Murder Case: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಸಾಯಿತಿಯನ್ನು ಪದ್ಮಜಾ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ತಾಯಿ ಮತ್ತು ಮಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಸೋಮವಾರ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ.
Bengaluru Murder Case: ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ. ಸಾಹಿತಿ(18) ಕೊಲೆಯಾದ ಯುವತಿಯಾಗಿದ್ದು, ಪದ್ಮಜಾ (60) ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿರುವ ವಿಚಾರವಾಗಿ ತಾಯಿ-ಮಗಳ ನಡುವೆ ಜಗಳ ಆರಂಭವಾಗಿತ್ತು. ಈ ವೇಳೆ ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಪ್ರಜ್ವಲ್ ಉಚ್ಛಾಟನೆ ಬಗ್ಗೆ ಮಹತ್ವದ ತೀರ್ಮಾನ ?
ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಸಾಯಿತಿಯನ್ನು ಪದ್ಮಜಾ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ತಾಯಿ ಮತ್ತು ಮಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಸೋಮವಾರ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ.
ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಸಾಹಿತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಪದ್ಮಜಾ ಅವರಿಗೆ ಗಂಭೀರ ಗಾಯಗಳಾಗಿವೆ. ಪ್ರಾಣಪಾಯದಿಂದ ಪಾರಾಗಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ವಿಡಿಯೋ ಕೇಸ್ ತನಿಖೆಗಾಗಿ ವಿಶೇಷ ತಂಡ ರಚನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.