Bengaluru Airhostess: ಡೇಟಿಂಗ್ ಆ್ಯಪಲ್ಲಿ ಲವ್: ಮದುವೆಯಾಗು ಎಂದಿದ್ದಕ್ಕೆ ಗಗನಸಖಿ‌ ಕೊಂದ ಟೆಕ್ಕಿ!

ಬೆಂಗಳೂರು: ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿಲ್ಲ ಅದು ಕೊಲೆ ಎಂಬ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ.

Written by - VISHWANATH HARIHARA | Last Updated : Mar 14, 2023, 10:36 AM IST
  • ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್
  • ಹಿಮಾಚಲಪ್ರದೇಶ ಮೂಲದ ಅರ್ಚನಾ ಹಾಗೂ ಕೇರಳ ಮೂಲದ ಆದೇಶ್​ ಗೆ ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯ
  • ಮೂರು ತಿಂಗಳಿಂದ ಮದುವೆಯಾಗುವಂತೆ ಅರ್ಚನಾ ಪೀಡಿಸುತ್ತಿದ್ದ ಗಗನಸಖಿ
Bengaluru Airhostess: ಡೇಟಿಂಗ್ ಆ್ಯಪಲ್ಲಿ ಲವ್: ಮದುವೆಯಾಗು ಎಂದಿದ್ದಕ್ಕೆ ಗಗನಸಖಿ‌ ಕೊಂದ ಟೆಕ್ಕಿ! title=

ಬೆಂಗಳೂರು: ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿಲ್ಲ ಅದು ಕೊಲೆ ಎಂಬ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಅರ್ಚನಾಳನ್ನ ಆಕೆಯ ಬಾಯ್​ ಫ್ರೆಂಡ್ ಆದೇಶ್​ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದು, ಈ ಹಿನ್ನೆಲೆ ಪೊಲೀಸರು ಆದೇಶ್​ ವಿರುದ್ಧ ಐಪಿಸಿ 302 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.

ಹಿಮಾಚಲಪ್ರದೇಶ ಮೂಲದ ಅರ್ಚನಾ ಹಾಗೂ ಕೇರಳ ಮೂಲದ ಆದೇಶ್​ ಗೆ ಡೇಟಿಂಗ್​ ಆ್ಯಪ್​ನಲ್ಲಿ ಪರಿಚಯವಾಗಿ ಇಬ್ಬರು ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಲೇರ್​ಲೈನ್ಸ್​​ನಲ್ಲಿ ಗಗನಸಖಿಯಾಗಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದರೆ ಮಾರ್ಚ್​ 11ರಂದು ಅರ್ಚನಾ ಆದೇಶ್ ವಾಸವಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು.

ಇದನ್ನೂ ಓದಿ: ́Health Department Employees Protest: 30ನೇ ದಿನಕ್ಕೆ ಕಾಲಿಟ್ಟ ಒಳಗುತ್ತಿಗೆ ಆರೋಗ್ಯ ಸಿಬ್ಬಂದಿಗಳ ಮುಷ್ಕರʼ

ಬಳಿಕ ಆದೇಶ್​, ನಶೆಯಲ್ಲಿ ಬಿಲ್ದಿಂಗ್​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆಗೆ ಕರೆ ಮಾಡಿ ತಿಳಿಸಿ ಪೊಲೀಸರಿಗೂ ಇದೆ ಮಾಹಿತಿ ಕೊಟ್ಟಿದ್ದ. ಆದರೆ ಈ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇದು ಆಕಸ್ಮಿಕವಲ್ಲ.ಅರ್ಚನಾಳನ್ನ ಕೊಲೆ ಮಾಡುವ ಉದ್ದೇಶದಿಂದ ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾರೆ ಎಂದು ಅರ್ಚನಾಳ ತಂದೆ ದೇವರಾಜ್ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆದ ಪೊಲೀಸರಿಗೆ ಮೇಲ್ನೋಟಕ್ಕೆ ಆದೇಶ್​ ಆಕೆಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿತ್ತು. 

ಆದೇಶ್​ನನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಬ್ಬರ ನಡುವಿನ ಗಲಾಟೆ ಕಹಾನಿ ಬಯಲಾಗಿದೆ. ಐಲ್ ಎಂಬ ಡೇಟಿಂಗ್ ಆ್ಯಪ್​ ಮೂಲಕ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಮದುವೆಯಾಗುವಂತೆ ಅರ್ಚನಾ ಪೀಡಿಸುತ್ತಿದ್ದಳು. ತನ್ನ ಮನೆಯಲ್ಲಿ ಮದುವೆ ತಯಾರಿ ನಡೆದಿದೆ‌.

ಇದನ್ನೂ ಓದಿ: Mandya: ನೆಚ್ಚಿನ ನಾಯಕನಿಗೆ ಹಾರ ಹಾಕುವ ಬರದಲ್ಲಿ ಅಭಿಮಾನಿಗಳಿಂದ ಎಡವಟ್ಟು!

ಈ ಹಿನ್ನೆಲೆ ಇಬ್ಬರ ಮದುವೆ ಬಗ್ಗೆ ಮಾತಾಡುವಂತೆ ಒತ್ತಾಯಿಸುತ್ತಿದ್ದಳು. ಆದರೆ ಆದೇಶ್​ ಮೂರು ತಿಂಗಳಿಂದ  ಕೆಲ ಕಾರಣ ಹೇಳಿ ಕಾಲಹರಣ ಮಾಡಿದ್ದ. ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅರ್ಚನಾ, ಮದುವೆಯಾಗಲು ತೀವ್ರ ಒತ್ತಡ ಹೇರಿದ್ದಳು. ಈ ವಿಚಾರವಾಗಿ ಮಾರ್ಚ್ 11 ರ ರಾತ್ರಿ ಇಬ್ಬರ ನಡುವೆ ಗಲಾಟೆ ಆಗಿದೆ. ಈ ವೇಳೆ ಅರ್ಚನಾ ಆದೇಶ್ ಗೆ ಮದುವೆಯಾಗದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಳು. ಇದರಿಂದ ಕೋಪಗೊಂಡ ಆದೇಶ್​, ಆಕೆಯನ್ನು ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್​ ತನಿಖೆ ವೇಳೆ ಬಯಲಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News