ಬೆಂಗಳೂರು: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆ ಶ್ರೀಗಳನ್ನು ಬಂಧಿಸಿರುವ ಪೊಲೀಸರು ಚಿತ್ರದುರ್ಗ ಪೊಲೀಸ್ ಠಾಣೆಯತ್ತ ಕರೆದೊಯ್ಯುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಪೋಕ್ಸೋ ಕಾಯ್ದೆಯಡಿ ಶ್ರೀಗಳ ವಿರುದ್ಧ ಪ್ರಕರಣ
ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಆಗಸ್ಟ್ 26ರಂದು ಶ್ರೀಗಳು ಸೇರಿದಂತೆ ಐವರ ವಿರುದ್ಧ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ನೆರವು ಪಡೆದು ಶ್ರೀಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಬಳಿಕ ಈ ಪ್ರಕರಣವು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು.
ಮುರುಘಾ ಶ್ರೀಗಳು A-1 ಆರೋಪಿ
ಫೋಕ್ಸೋ ಪ್ರಕರಣದಡಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಮುರುಘಾಶ್ರೀಗಳು A-1 ಆರೋಪಿಯಾದರೆ, A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದಾರೆ. A-3 ಆರೋಪಿ ಮಠದ ಉತ್ತರಾಧಿಕಾರಿ ಬಸವಾದಿತ್ಯ , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
The chief pontiff of Sri Murugha Mutt, Shivamurthy Murugha Sharanaru, accused of sexually assaulting minors, arrested: Alok Kumar, ADGP, Law and Order Karnataka pic.twitter.com/WNDxTvZ7Ha
— ANI (@ANI) September 1, 2022
ಲುಕ್‌ಔಟ್ ನೋಟಿಸ್ ಜಾರಿ
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರಿಂದ ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲಿಯೇ ಗುರುವಾರ ರಾತ್ರಿ ಮಠದಲ್ಲಿಯೇ ಇದ್ದ ಶ್ರೀಗಳನ್ನು ಬಂಧಿಸಲಾಗಿದೆ. ಈ ಹಿನ್ನೆಲೆ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಮತ್ತು ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರ ತಂಡ ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆ ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಯತ್ತ ಕರೆದೊಯ್ಯಲಿದ್ದಾರೆ. ಅದಕ್ಕೂ ಮುನ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ ಅನ್ನೋ ಮಾಹಿತಿ ದೊರೆತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.