BJP MLA rape case : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ರಾಮದುಲರ್‌ ಗೊಂಡ್‌ಗೆ ಯುಪಿ ಹೈಕೋರ್ಟ್ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಘಟನೆ ಒಂಬತ್ತು ವರ್ಷಗಳ ಹಿಂದೆ ನಡೆದಿತ್ತು, ಸಧ್ಯ ಪ್ರಕರಣದ ತೀರ್ಪು ಹೊರ ಬಿದ್ದಿದೆ.


COMMERCIAL BREAK
SCROLL TO CONTINUE READING

ಇದರಿಂದ ವಿಧಾನಸಭೆ ರಾಮ್‌ದುಲರ್‌ ಸದಸ್ಯತ್ವದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ. ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದರೆ, ಆ ದಿನಾಂಕದಿಂದ ಇನ್ನೂ ಆರು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ.


ಇದನ್ನೂ ಓದಿ: ವಿದೇಶಿ ಕರೆನ್ಸಿ ಕಡಿಮೆ ಬೆಲೆಗೆ ಕೊಡೋದಾಗಿ ವಂಚನೆಗೆ ಸಂಚು : ಪತಿ ಲಾಕ್.. ಕರೆನ್ಸಿ ಜೊತೆಗೆ ಪತ್ನಿ ಎಸ್ಕೇಪ್..!


ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ-ಶಾಸಕ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಅಹ್ಸನ್ ಉಲ್ಲಾಖಾನ್ ತೀರ್ಪು ನೀಡಿದ್ದಾರೆ. ದುಡ್ಡಿ ವಿಧಾನಸಭಾ ಕ್ಷೇತ್ರದ ಶಾಸಕ ಗೊಂಡು ಅವರಿಗೆ 10 ಲಕ್ಷ ರೂಪಾಯಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ಹಣವನ್ನು ಸಂತ್ರಸ್ತರಿಗೆ ಹಸ್ತಾಂತರಿಸುವಂತೆ ಆದೇಶಿಸಲಾಗಿದೆ. 


ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತ್ಯಪ್ರಕಾಶ್ ತ್ರಿಪಾಠಿ ಅವರು ಡಿಸೆಂಬರ್ 12 ರಂದು ನ್ಯಾಯಾಲಯವು ಶಾಸಕನಿಗೆ ಶಿಕ್ಷೆ ವಿಧಿಸಿದೆ ಎಂದು ಮಾಹಿತಿ ನೀಡಿದ್ದಾರೆ. ತೀರ್ಪು ಹೊರಬೀಳುವ ಮುನ್ನವೇ ಶಾಸಕರ ಪರವಾಗಿ ವಾದ ಮಂಡಿಸಿದ ವಕೀಲರು.. ಶಾಸಕರ ಶಿಕ್ಷೆಯನ್ನು ಕಡಿತಗೊಳಿಸಬೇಕು.. ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಹಿತಕಾಪಾಡುವ ಸಂಪೂರ್ಣ ಜವಾಬ್ದಾರಿಯನ್ನು ತಮ್ಮ ಕಕ್ಷಿದಾರರೇ ಹೊರುತ್ತಾರೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. 


ಇದನ್ನೂ ಓದಿ:ನಾಳೆ ಯತೀಂದ್ರನಿಗೆ ‘ಟಿಪ್ಪು’ ಎಂದು ಹೆಸರು ಇಟ್ಟರೂ ಅಚ್ಚರಿಯಿಲ್ಲ: ಬಿಜೆಪಿ ಟೀಕೆ


2014ರ ನವೆಂಬರ್ 4ರಂದು ಈ ಘಟನೆ ನಡೆದಿತ್ತು ಎಂದು ಸತ್ಯಪ್ರಕಾಶ್ ತ್ರಿಪಾಠಿ ತಿಳಿಸಿದ್ದಾರೆ. ಗೊಂಡ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದಾಗ ಗೊಂಡನ ಪತ್ನಿ ಗ್ರಾಮದ ಸರಪಂಚ್ ಆಗಿದ್ದರು. ಸಂತ್ರಸ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ಮೈರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಘಟನೆ ನಡೆದಾಗ ಗೊಂಡ ಶಾಸಕರಾಗಿರಲಿಲ್ಲ. ಆರಂಭದಲ್ಲಿ ಪೋಕ್ಸೊ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ ಅವರು ಶಾಸಕರಾಗಿ ಆಯ್ಕೆಯಾದ ನಂತರ, ಪ್ರಕರಣದ ಫೈಲ್‌ಗಳನ್ನು ಸಂಸದ-ಶಾಸಕ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. 


ಕಳೆದ ಒಂಬತ್ತು ವರ್ಷಗಳಿಂದ ಶಾಸಕ ಮತ್ತು ಅವರ ಆಪ್ತರಿಂದ ಪ್ರಕರಣವನ್ನು ಹಿಂಪಡೆಯುವಂತೆ ಸಾಕಷ್ಟು ಒತ್ತಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಸಂತ್ರಸ್ತೆಗೆ ಪ್ರಸ್ತುತ 25 ವರ್ಷ. ಅವಳು ತನ್ನ ಪತಿ ಮತ್ತು ಅತ್ತೆಯೊಂದಿಗೆ ವಾಸಿಸುತ್ತಾಳೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ವಿಜಯ್ ಸಿಂಗ್ ಅವರನ್ನು ಸೋಲಿಸಿ ಗೊಂಡ ಶಾಸಕರಾಗಿ ಆಯ್ಕೆಯಾದರು. ಸಧ್ಯ ಜೈಲು ಶಿಕ್ಷೆಯಿಂದಾಗಿ ಅನರ್ಹಗೊಳ್ಳುವ ಸಾಧ್ಯತೆ ಇದೆ. ಮರು ಚುನಾವಣೆ ನಡೆಯಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.