ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಯುವಕನ ಬರ್ಬರ ಹತ್ಯೆ
ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ನೆಟ್ಟಾರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ: ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ (ಜುಲೈ 26) ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು.
ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ನೆಟ್ಟಾರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ- ಟ್ರೋಲ್ ಪೇಜ್ ಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿನಯ್ ಗುರೂಜಿ
ಬೈಕ್‌ನಲ್ಲಿ ಬಂದ ಇಬ್ಬರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್‌ರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿಮಧ್ಯೆ ಕೊನೆಯುಸಿರೆಳೆದರೆನ್ನಲಾಗಿದೆ.
ಇದನ್ನೂ ಓದಿ- ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಠಾಧೀಶರಿಂದ ಹೈಕಮಾಂಡ್ ಗೆ ಪತ್ರ
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬೆಳ್ಳಾರೆ ಪೇಟೆ ಸಹಿತ ಸುತ್ತಮುತ್ತ ಪೋಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಘಟನೆ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.