Bomb threat: ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ.!
Bomb Threat to DK Shivakumar School: ಬೆಂಗಳೂರಿನಲ್ಲಿ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ನಿನ್ನೆ ಸಂಜೆ ವೇಳೆ ಇ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಶಾಲೆಗೆ ಬಂದಾಗ ಸಂಗತಿ ಬಯಲಾಗಿದೆ. ಆರ್ ಆರ್ ನಗರ ಠಾಣೆ ಪೊಲೀಸರು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಖಾತೆ ತೆರೆದ ಆಮ್ ಆದ್ಮಿ ಪಕ್ಷ...!
ಬಾಂಬ್ ಬೆದರಿಕೆ ಹಿನ್ನೆಲೆ ಶಾಲೆಯಿಂದ ಮಕ್ಕಳನ್ನ ಶಿಫ್ಟ್ ಮಾಡಲಾಗಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ. ನ್ಯಾಷನಲ್ ಹಿಲ್ ವ್ಯೂವ್ ಸ್ಕೂಲ್ನ ಯೂನಿಟ್ 3ಗೆ ಮೇಲ್ ಬಂದಿದೆ. ಶಾಲಾ ಸಿಬ್ಬಂದಿ ಯೂನಿಟ್ 1, ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನ ಶಿಫ್ಟ್ ಮಾಡಿದ್ದಾರೆ. ಬೆದರಿಕೆ ಮೇಲ್ ಬಂದಿರುವುದು ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಯೂನಿಟ್ 1ನಲ್ಲಿದ್ದ ಎಲ್ ಕೆಜಿಯಿಂದ 10 ನೇ ತರಗತಿವರೆಗಿನ ಮಕ್ಕಳನ್ನ ಸಿಬ್ಬಂದಿ ಶಿಫ್ಟ್ ಮಾಡಿದ್ದಾರೆ. ಸದ್ಯ ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಯುತ್ತಿದೆ.
ಸ್ಕೂಲ್ ಗೆ ಬಂದಿರೋ ಡಿಕೆಶಿ ಪುತ್ರಿ:
ಬಾಂಬ್ ಬೆದರಿಕೆ ಬಂದಿರುವ ಸುದ್ದಿ ತಿಳಿದ ತಕ್ಷಣ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಶಾಲೆ ಬಳಿ ಬಂದಿದ್ದು, ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಮೂತ್ರ ವಿಸರ್ಜನೆಗೂ ಜಿಎಸ್ಟಿ, ಕಟ್ಟದಿದ್ದರೇ ಅರೆಸ್ಟ್: ವಾಟಾಳ್ ನಾಗರಾಜ್ ಟೀಕೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.