ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಜಲ್ಲಾರ್ ಪೊಲೀಸ್ ಠಾಣೆ ಬಳಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕನಿಷ್ಠ 11 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಇದನ್ನೂ ಓದಿ: Funny Video: ಈ ಮಂಗಣ್ಣ ಸೋಪ್ ಹಚ್ಚಿ, ಬ್ರಷ್ನಿಂದ ಉಜ್ಜಿ ಥೇಟ್ ಮನುಷ್ಯರಂತೇ ಬಟ್ಟೆ ಒಗೆಯುತ್ತೆ!
ಮಧ್ಯಪ್ರದೇಶದ ಬೇತುಲ್ ಸಮೀಪದ ಗುಡ್ಗಾಂವ್ ಮತ್ತು ಭೈಸ್ದೇಹಿ(Bhaisdehi) ನಡುವೆ ಶುಕ್ರವಾರ ನಸುಕಿನ ಜಾವವೇ ಈ ಭೀಕರ ದುರಂತ ನಡೆದಿದೆ. SUV ಕಾರಿಗೆ ಬಸ್ ಡಿಕ್ಕಿಯಾಗಿ 11 ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Betul, Madhya Pradesh | 11 people died in a bus accident which collided with a car near Jhallar police station. One injured person has been admitted to a hospital: SP Betul Simala Prasad pic.twitter.com/aNPQmt5VIF
— ANI MP/CG/Rajasthan (@ANI_MP_CG_RJ) November 4, 2022
ಇದನ್ನೂ ಓದಿ: ITBP Recruitment 2022 : ITBP ಯಲ್ಲಿ 470 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಮಾಹಿತಿ
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ‘ಭೀಕರ ಅಪಘಾತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ’ ಎಂದು ಬೇತುಲ್ ಎಸ್ಪಿ ಸಿಮಲಾ ಪ್ರಸಾದ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.