ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಜಲ್ಲಾರ್ ಪೊಲೀಸ್ ಠಾಣೆ ಬಳಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕನಿಷ್ಠ 11 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Funny Video: ಈ ಮಂಗಣ್ಣ ಸೋಪ್‌ ಹಚ್ಚಿ, ಬ್ರಷ್‌ನಿಂದ ಉಜ್ಜಿ ಥೇಟ್‌ ಮನುಷ್ಯರಂತೇ ಬಟ್ಟೆ ಒಗೆಯುತ್ತೆ!


ಮಧ್ಯಪ್ರದೇಶದ ಬೇತುಲ್‍ ಸಮೀಪದ ಗುಡ್ಗಾಂವ್ ಮತ್ತು ಭೈಸ್ದೇಹಿ(Bhaisdehi) ನಡುವೆ ಶುಕ್ರವಾರ ನಸುಕಿನ ಜಾವವೇ ಈ ಭೀಕರ ದುರಂತ ನಡೆದಿದೆ. SUV ಕಾರಿಗೆ ಬಸ್ ಡಿಕ್ಕಿಯಾಗಿ 11 ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.


ITBP Recruitment 2022 : ITBP ಯಲ್ಲಿ 470 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಮಾಹಿತಿ


ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ‘ಭೀಕರ ಅಪಘಾತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ’ ಎಂದು ಬೇತುಲ್ ಎಸ್ಪಿ ಸಿಮಲಾ ಪ್ರಸಾದ್ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.