ತಂಗಿಯನ್ನ ಪ್ರೀತಿಸಿದ್ದಕ್ಕೆ ಯುವಕನನ್ನ ಬರ್ಬರವಾಗಿ ಕೊಲೆಗೈದ ಸಹೋದರರು!!

Crime News: ತಂಗಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಆಕೆಯ ಸಹೋದರರು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಜರುಗಿದೆ.

Written by - Puttaraj K Alur | Last Updated : Mar 30, 2025, 01:05 PM IST
  • ತಂಗಿಯನ್ನು ಪ್ರೀತಿಸಿದ ಕಾರಣಕ್ಕೆ ಯುವಕ ಬರ್ಬರ ಹತ್ಯೆ ನಡೆದಿದೆ
  • ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಘಟನೆ
  • ಗಲಾಟೆ ವೇಳೆ ಯುವಕನ ತಲೆಯ ಮೇಲೆ ಕಲ್ಲು ಹಾಕಿ ಭೀಕರ ಹತ್ಯೆ
ತಂಗಿಯನ್ನ ಪ್ರೀತಿಸಿದ್ದಕ್ಕೆ ಯುವಕನನ್ನ ಬರ್ಬರವಾಗಿ ಕೊಲೆಗೈದ ಸಹೋದರರು!!

Bidar Crime News: ತಂಗಿಯನ್ನ ಪ್ರೀತಿಸಿದ ಎಂಬ ಕಾರಣಕ್ಕೆ ಆಕೆಯ ಸಹೋದರರು ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

Add Zee News as a Preferred Source

ಪ್ರಶಾಂತ್ ಬಿರಾದಾರ್ (25) ಬರ್ಬರವಾಗಿ ಕೊಲೆಯಾದ ಯುವಕ. ಯಲ್ಲಾಲಿಂಗ ಮೇತ್ರೆ ಮತ್ತು ಪ್ರಶಾಂತ್ ಮೇತ್ರೆ ಕೊಲೆ ಆರೋಪಿಗಳು. ಕೊಲೆಯಾದ ಯುವಕ ಹಾಗೂ ಆರೋಪಿಗಳ ಸಹೋದರಿ ನಡುವೆ ಕೆಲ ವರ್ಷಗಳಿಂದ ಪ್ರೇಮಾಂಕುರವಾಗಿತ್ತು. ಶುಕ್ರವಾರ ರಾತ್ರಿ ನಿರಗುಡಿ ಗ್ರಾಮದಲ್ಲಿ ಇದೇ ವಿಚಾರವಾಗಿ ಪ್ರಶಾಂಶ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದೆ. 

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ

ಗಲಾಟೆ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಆರೋಪಿಗಳು ಆತನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಕೊಲೆಯಾದ ಯುವಕನ ಮೃತದೇಹವನ್ನು ಬಸವಕಲ್ಯಾಣ ಶವಾಗಾರಕ್ಕೆ ತರಲಾಗಿತ್ತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ಈ ಘಟನೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿದ ಇಬ್ಬರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ ರೈತರು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News