Road Accident: ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ನಡೆದಿದೆ. ಬಸ್ ನಲ್ಲಿ 30 ಮಂದಿ ಪ್ರಯಾಣಿಕರಲ್ಲಿ ಶಿಕ್ಷಕರೇ ಹೆಚ್ಚು ಮಂದಿ ಇದ್ದರು‌. ಅದೃಷ್ಟವಶಾತ್ 6-7 ಮಂದಿ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೇ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ  ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ‌.  ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಇದನ್ನೂ ಓದಿಜಗಳ ಬಿಡಿಸಿದ ಕಾರಣಕ್ಕೆ ದೋಸೆ ಹಂಚಿನಿಂದ ಹೊಡೆದು ಮಹಿಳೆಯ ಕೊಲೆ


ಇನ್ನು, ಕಂಡಕ್ಟರ್ ಬಸ್ ನ್ನು ಓಡಿಸುತ್ತಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.  ಇಂದು ಚಾಲಕನ ಬದಲು ನಿರ್ವಾಹಕ ಬಸ್ ಚಾಲನೆ ಮಾಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ಆರೋಪಿಸಿದ್ದಾರೆ.


ಇದನ್ನೂ ಓದಿ- Cashback Fraud: 'ಸರಕು ಖರೀದಿಸಿ ಶೇ.100 ರಷ್ಟು ಕ್ಯಾಶ್ ಬ್ಯಾಕ್ ಪಡೆಯಿರಿ' ಅಂತಾ ಯಾರಾದರೂ ಹೇಳಿದರೆ ತಕ್ಷಣ ಎಚ್ಚೆತ್ತುಕೊಳ್ಳಿ, ಕಾರಣ ಇಲ್ಲಿದೆ!


ಬಸ್ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಲಗಡೆಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕೇವಲ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರಿಗೆ ಮೂಳೆ ಹಾಗೂ ಹೊಟ್ಟೆ ಸೇರಿದಂತೆ ದೇಹದ ವಿವಿಧ  ಒಳ  ಭಾಗದಲ್ಲಿ ನೋವು ಕಾಣಿಸಿಕೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.