EXCLUSIVE : ಗಾಂಜಾ ಮಾರುತ್ತಿದ್ದ ಕ್ಯಾಬ್ ಚಾಲಕರು ಅಂದರ್: 25 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದು ಕ್ಯಾಬ್ ಓಡಿಸುತ್ತಿದ್ದರು. ಆದರೆ ಹೆಚ್ಚಿನ ಹಣ ಗಳಿಸಬೇಕು, ಐಷಾರಾಮಿ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿ ಮಾಡಿ  ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇದರ ಪೊಲೀಸರ ಅತಿಥಿಗಳಾಗಿದ್ದಾರೆ.

Written by - VISHWANATH HARIHARA | Edited by - Krishna N K | Last Updated : Jan 10, 2024, 04:55 PM IST
  • ಸಿಲಿಕಾನ್ ಸಿಟಿ ಪೊಲೀಸರ ಸಮರ ಮುಂದುವರೆದಿದೆ.
  • ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು.
  • ಇಬ್ಬರು ಆರೋಪಿಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಬಂಧಿಸಿದ್ದಾರೆ‌.
 EXCLUSIVE : ಗಾಂಜಾ ಮಾರುತ್ತಿದ್ದ ಕ್ಯಾಬ್ ಚಾಲಕರು ಅಂದರ್: 25 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ title=

ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಸಿಲಿಕಾನ್ ಸಿಟಿ ಪೊಲೀಸರ ಸಮರ ಮುಂದುವರೆದಿದೆ. ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಬಂಧಿಸಿದ್ದಾರೆ‌.

ವಿಜಯ್ ಕುಮಾರ್, ವಿಜಯ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ‌. ಆರೋಪಿಗಳು ಮೂಲತ: ಯಾದಗಿರಿ, ವಿಜಯಪುರ ಜಿಲ್ಲೆಯವರಾಗಿದ್ದು, ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದು ಕ್ಯಾಬ್ ಓಡಿಸುತ್ತಿದ್ದರು. ಆದರೆ ಹೆಚ್ಚಿನ ಹಣ ಗಳಿಸಬೇಕು, ಐಷಾರಾಮಿ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿ ಮಾಡಿ  ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. 

ಇದನ್ನೂ ಓದಿ: ಲೋಕಸಭೆ ಚುನಾವಣೆ ತಯಾರಿಗೆ ಪೂರ್ವಭಾವಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪರಿಚಯವಿರುವ ಗಿರಾಕಿಗಳು, ಕಾಲೇಜು ವಿದ್ಯಾರ್ಥಿಗಳು ಐಟಿ/ಬಿಟಿ ಉದ್ಯೋಗಿಗಳಿಗೆ ಟಾರ್ಗೆಟ್ ಮಾಡಿ ಹಣ ಗಳಿಸುತ್ತಿದ್ದರು. ಸದ್ಯ ಇವರ ನವರಂಗಿ ಆಟದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಹೊಸಕೆರೆ ಹಳ್ಳಿ ಬಳಿ ಕಾರಿನಲ್ಲಿ ಗಾಂಜಾ ಮಾರುತ್ತಿದ್ದಾಗ  ದಾಳಿ ನಡೆಸಿ ಈ ಇಬ್ಬರನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳಿಂದ 25 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ಒಂದು ತೂಕದ ಮೆಶಿನ್, ಎರಡು ಮೊಬೈಲ್, ಒಂದು ಕಾರು ಸೀಜ್  ಮಾಡಿದ್ದಾರೆ.ಈ  ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಇನ್ನೂಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News