ಚೈತ್ರಾ & ಹಾಲಶ್ರೀ ಆಪ್ತರಿಗೆ ಸಿಸಿಬಿ ನೊಟೀಸ್,ವಿಚಾರಣೆಯಲ್ಲಿ ಹೊರಬಿಳುತ್ತಾ ದೊಡ್ಡ ದೊಡ್ಡ ಹೆಸರು.!

ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ನಿಂದ 5 ಕೋಟಿ ವಂಚನೆ ಪ್ರಕರಣ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ತನಿಖೆಗೆ ಒಳಪಡಿಸಿದ್ದ ಅಧಿಕಾರಿಗಳು. ಇದರ ನಡುವೆ ಮತ್ತಷ್ಟು ಮಂದಿಗೆ ನೋಟಿಸ್ ನೀಡಿ ವಿಚಾರಣೆ  ಹಾಜರಾಗುವಂತೆ ಸೂಚಿಸಿದ್ದಾರೆ.. ಹಾಗಾದ್ರೇ ಯಾರಿಗೇಲ್ಲಾ ನೋಟಿಸ್ ನೀಡಲಾಗಿದೆ ಅನ್ನೋದರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ...

Written by - Bhavya Sunil Bangera | Edited by - Manjunath N | Last Updated : Sep 21, 2023, 07:03 PM IST
  • ರಾಜ್ಯ ರಾಜ್ಯದಲ್ಲಿ ಬಾರಿ ಸದ್ದು ಮಾಡ್ತಿರುವ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ೫ ಕೋಟಿ ವಂಚನೆ ಪ್ರಕರಣ ತನಿಖೆ ಮತ್ತಷ್ಟು ಚುರುಕಾಗಿದೆ.
  • ನಿನ್ನೆ ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನ್ಯಾಯಲಯ ನೀಡಿದೆ.
  • ಇದರ ಬೆನ್ನಲ್ಲೇ ಸಿಸಿಬಿ ತನಿಖಾಧಿಕಾರಿಗಳು ತನಿಖೆಯನ್ನ ಚುರುಕುಗೊಳಿಸಿದ್ದಾರೆ
 ಚೈತ್ರಾ & ಹಾಲಶ್ರೀ ಆಪ್ತರಿಗೆ ಸಿಸಿಬಿ ನೊಟೀಸ್,ವಿಚಾರಣೆಯಲ್ಲಿ ಹೊರಬಿಳುತ್ತಾ ದೊಡ್ಡ ದೊಡ್ಡ ಹೆಸರು.! title=

ಬೆಂಗಳೂರು: ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ನಿಂದ 5 ಕೋಟಿ ವಂಚನೆ ಪ್ರಕರಣ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ತನಿಖೆಗೆ ಒಳಪಡಿಸಿದ್ದ ಅಧಿಕಾರಿಗಳು. ಇದರ ನಡುವೆ ಮತ್ತಷ್ಟು ಮಂದಿಗೆ ನೋಟಿಸ್ ನೀಡಿ ವಿಚಾರಣೆ  ಹಾಜರಾಗುವಂತೆ ಸೂಚಿಸಿದ್ದಾರೆ.. ಹಾಗಾದ್ರೇ ಯಾರಿಗೇಲ್ಲಾ ನೋಟಿಸ್ ನೀಡಲಾಗಿದೆ ಅನ್ನೋದರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ...

ಯೆಸ್.. ರಾಜ್ಯ ರಾಜ್ಯದಲ್ಲಿ ಬಾರಿ ಸದ್ದು ಮಾಡ್ತಿರುವ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ೫ ಕೋಟಿ ವಂಚನೆ ಪ್ರಕರಣ ತನಿಖೆ ಮತ್ತಷ್ಟು ಚುರುಕಾಗಿದೆ.. ನಿನ್ನೆ ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನ್ಯಾಯಲಯ ನೀಡಿದೆ. ಇದರ ಬೆನ್ನಲ್ಲೇ ಸಿಸಿಬಿ ತನಿಖಾಧಿಕಾರಿಗಳು ತನಿಖೆಯನ್ನ ಚುರುಕುಗೊಳಿಸಿದ್ದಾರೆ. ಅಭಿನವ ಹಾಲಶ್ರೀ ಸ್ವಾಮೀಜಿ ಕಡೆಯಿಂದ ಹಣ ಜಪ್ತಿ, ಸ್ಥಳ ಮಹಜರು ಹಿನ್ನೆಲೆಯಲ್ಲಿ ವಿಜಯನಗರದತ್ತ ಸಿಸಿಬಿ ಅಧಿಕಾರಿಗಳು ಸ್ವಾಮೀಜಿಯನ್ನು ಕರೆದೊಯ್ದುದಿದ್ದಾರೆ.

ಇದನ್ನೂ ಓದಿ: ಚಿನ್ನ ಖರೀದಿಗೆ ಇದುವೇ ಬೆಸ್ಟ್ ಟೈಂ… 10 ಗ್ರಾಂ ಬಂಗಾರದ ದರ ಹೇಗಿದೆ ಗೊತ್ತಾ?

ಇನ್ನೂ ಇದರ ಮಧ್ಯ ಸಿಸಿಬಿ ಅಧಿಕಾರಿಗಳು ಅಭಿನವ ಹಾಲಶ್ರೀ ಆಪ್ತರಾಗಿರುವ ತಿಪ್ಪೇಸ್ವಾಮಿ, ಲಕ್ಷ್ಮಣ ಮತ್ತು ಪ್ರಣವ್ ಪ್ರಸಾದ್​ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಹಾಜರಾಗುವಂತೆ ತಿಳಿಸಿದ್ದು. ಅದಲ್ಲದೇ ಚೈತ್ರಾ ಕುಂದಾಪುರ ಆಪ್ತನಾದ ಮಂಜು ಎಂಬಾತನಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆ ಹಾಜರಾಗುತ್ತೆ ತಿಳಿಸಲಾಗಿದೆ.. ಇನ್ನೂ ಇದೇ ವಿಚಾರಕ್ಕೆ  ಸಂಬಂಧಿಸಿದಂತೆ ಮಾತನಾಡಿದ ನಗರ ಪೊಲೀಸ್ ಆಯುಕ್ತರು ಬಿ ದಯಾನಂದರವರು..ಈಗಾಗಲೇ ಎಂಟು ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಆರೋಪಿಗಳ ಹೆಸರಿನಲ್ಲಿದ್ದ  ಹಣ,ಠೇವಣಿ, ಚಿನ್ನ ವಶಕ್ಕೆ ಪಡೆಯಲಾಗಿದೆ. ಅದರ ಜೊತೆಗೆ ಎ೧ ಆರೋಪಿಯಾಗಿರುವ ಚೈತ್ರ ಕುಂದಾಪುರಿಗೆ ಸಂಬಂಧಿಸಿದ ಸುಮಾರು ಎರಡು ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ದಾಖಲಾತಿಗಳನ್ನ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ರೂ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಕೋಚ್ ಬದಲಾವಣೆ: ಹೊಸ ಕೋಚ್ ಆಗಿ ಈ ಅನುಭವಿ ಆಟಗಾರನ ನೇಮಕ

ಅಭಿನವ ಹಾಲಶ್ರೀ ಸ್ವಾಮೀಜಿ ಆರೆಸ್ಟ್ ಆದ್ರೇ ದೊಡ್ಡ ವ್ಯಕ್ತಿಗಳ ಹೆಸರು ಹೊರಬಿಳುತ್ತೆ ಅಂತಾ ಚೈತ್ರಾ ಕುಂದಾಪುರ ಹೇಳಿದ್ರೂ.. ಅದರಂತೆ ಎ೩ ಆರೋಪಿಯನ್ನ ಅರೆಸ್ಟ್ ಮಾಡಿ, ಸಿಸಿಬಿ ಅಧಿಕಾರಿಗಳು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು.. ಇನ್ನಾದ್ರೂ ಆ ದೊಡ್ಡ ದೊಡ್ಡ ವ್ಯಕ್ತಿಗಳು ಹೆಸರು ಹೊರಬಿಳುತ್ತಾ ಅನ್ನೋದು ಕಾಯ್ದು ನೋಡ್ಬೇಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

 

Trending News