ಸಿಸಿಬಿ ಪೊಲೀಸರ ಕಾರ್ಯಾಚರಣೆ: ನೈಜೀರಿಯನ್ ಡ್ರಗ್ ಪೆಡ್ಲರ್ ಬಂಧನ
ವಿದ್ಯಾರ್ಥಿ ವೀಸಾದಲ್ಲಿ ಭಾರತಕ್ಕೆ ಬಂದು ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಸಿಸಿಬಿ ಮಾದಕ ಪದಾರ್ಥ ನಿಗ್ರಹ ದಳ ಬಂಧಿಸಿದೆ. ಜಾನ್ ನೆರೋ ಬಂಧಿತ ಆರೋಪಿ.
ಬೆಂಗಳೂರು: ವಿದ್ಯಾರ್ಥಿ ವೀಸಾದಲ್ಲಿ ಭಾರತಕ್ಕೆ ಬಂದು ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಸಿಸಿಬಿ ಮಾದಕ ಪದಾರ್ಥ ನಿಗ್ರಹ ದಳ ಬಂಧಿಸಿದೆ. ಜಾನ್ ನೆರೋ ಬಂಧಿತ ಆರೋಪಿ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅಬ್ಬರ: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಈತ ಎಂಟು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದಿದ್ದ. ಓದು ಮುಗಿದ ಬಳಿಕ ಹಣ ಗಳಿಸಲು ಮಾದಕ ದಂಧೆಗಿಳಿದಿದ್ದ. ವೀಸಾ ಅವಧಿ ಉಲ್ಲಂಘಿಸಿದ ಕಾರಣಕ್ಕೆ ಈ ಹಿಂದೆ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದರು. ಶಿಕ್ಷೆ ಅನುಭವಿಸಿ ಹೊರಬಂದಮೇಲೂ ಸ್ವದೇಶಕ್ಕೆ ತೆರಳದೇ ಮತ್ತೆ ಮಾದಕ ವಸ್ತು ಮಾರಾಟವನ್ನು ಮುಂದುವರೆಸಿದ್ದ.
ಇದನ್ನೂ ಓದಿ: Kiccha Sudeep: ಪೊಲೀಸ್ ತಂಡದ ಜೊತೆ ಕಿಚ್ಚನ ಕ್ರಿಕೆಟ್.. ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಸುದೀಪ್
ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನ ಬಂಧಿಸಿ 1.5 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್, ಲ್ಯಾಪ್ ಟಾಪ್, ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.