ರೌಡಿಶೀಟರ್ ಗಳಿಗೆ ಸಿಸಿಬಿ ಶಾಕ್: ಪಾತಕಿಗಳ ಮನೆ ಮೇಲೆ ರೇಡ್

CCB Raid: ತೆರೆಮರೆಯಲ್ಲಿ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿ ಶಂಕೆ ಹಿನ್ನೆಲೆಯಲ್ಲಿ ನಗರದ 86ಕ್ಕೂ ಹೆಚ್ಚು ಕುಖ್ಯಾತ ರೌಡಿಗಳ ಮನೆಗಳ ಮೇಲೆ ಸಿಸಿಬಿಯ ಐವರು ಎಸಿಪಿ ನೇತೃತ್ವದ ತಂಡ ದಾಳಿ ನಡೆಸಿ 25 ಮಂದಿ ರೌಡಿಗಳನ್ನು ವಶಕ್ಕೆ ಪಡೆದುಕೊಂಡಿದೆ.

Written by - VISHWANATH HARIHARA | Edited by - Yashaswini V | Last Updated : Nov 23, 2022, 12:02 PM IST
  • ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಅಡಿಯಲ್ಲಿ ನಗರದ ರೌಡಿ ಶೀಟರ್ ಗಳ ಮನೆಗಳ ಮೇಲೆ ಇಂದು ಬೆಳ್ಳಂಬೆಳ್ಳಗೆ ಸಿಸಿಬಿ ಪೊಲೀಸರ ದಾಳಿ
  • ಕುಖ್ಯಾತ ರೌಡಿಗಳಾದ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ್, ಬೇಕರಿ ರಘು, ಒಂಟೆ ರೋಹಿತ್ ಸೇರಿದಂತೆ ಹಲವು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ
  • ಕೋತಿರಾಮ, ಟಾಮಿ, ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಸೇರಿ 25 ರೌಡಿಗಳನ್ನು ವಶಕ್ಕೆ ಪಡೆದಿರುವ ಸಿಸಿಬಿ
ರೌಡಿಶೀಟರ್ ಗಳಿಗೆ ಸಿಸಿಬಿ ಶಾಕ್: ಪಾತಕಿಗಳ ಮನೆ ಮೇಲೆ ರೇಡ್ title=
CCB shock for rowdysheeters

CCB Raid: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಅಡಿಯಲ್ಲಿ ನಗರದ ರೌಡಿ ಶೀಟರ್ ಗಳ ಮನೆಗಳ ಮೇಲೆ ಇಂದು ಬೆಳ್ಳಂಬೆಳ್ಳಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿ ಶಂಕೆ ಹಿನ್ನೆಲೆಯಲ್ಲಿ ನಗರದ 86ಕ್ಕೂ ಹೆಚ್ಚು ಕುಖ್ಯಾತ ರೌಡಿಗಳ ಮನೆಗಳ ಮೇಲೆ ಸಿಸಿಬಿಯ ಐವರು ಎಸಿಪಿ ನೇತೃತ್ವದ ತಂಡ ದಾಳಿ ನಡೆಸಿ 25 ಮಂದಿ ರೌಡಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಕುಖ್ಯಾತ ರೌಡಿಗಳಾದ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ್, ಬೇಕರಿ ರಘು,  ಒಂಟೆ ರೋಹಿತ್ ಸೇರಿದಂತೆ ಹಲವು ರೌಡಿ ಶೀಟರ್ ಗಳ ಮನೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಕೆಲ ರೌಡಿಗಳು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ- Delhi Murder Case: ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದ ಯುವಕ!

ಇನ್ನು‌ ಕೋತಿರಾಮ, ಟಾಮಿ, ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಸೇರಿ 25 ರೌಡಿಗಳನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.‌ ರಾಘವೇಂದ್ರ ಮನೆಯಲ್ಲಿ ಎರಡು ಲಾಂಗ್ ಪತ್ತೆಯಾಗಿವೆ ಎಂದು‌ ಪೊಲೀಸರು ತಿಳಿಸಿದ್ದಾರೆ‌.

ಇದನ್ನೂ ಓದಿ- Shocking: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ, ಹಲವರ ನಗ್ನ ವಿಡಿಯೋ ಸೆರೆ!

ಇನ್ನೂ ಕೆಲ ರೌಡಿ ಶೀಟರ್ ಗಳು ಬಿಬಿಎಂಪಿ ಚುನಾವಣೆಗೆ ಹಪ್ತಾ ವಸೂಲಿ ಸೇರಿ ಚುನಾವಣೆಗೆ ತಮ್ಮ ಕುಟುಂಬದವರನ್ನು  ನಿಲ್ಲಿಸಲು ತಯಾರಿ ನಡೆಸುತ್ತಿದ್ದರು. ಹೀಗಾಗಿ ದಾಳಿ ನಡೆಸಿರುವ ಅಧಿಕಾರಿಗಳು ರೌಡಿ ಶೀಟರ್ ಗಳಿಗೆ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News