Chamarajanagar News: ಕಾಲೇಜಿಗೂ ಕಾಲಿಟ್ಟ ಖದೀಮರ ಗ್ಯಾಂಗ್ !
Chamarajanagar News: ಚಾಮರಾಜನಗರ ಸರ್ಕಾರಿ ಪಿಯು ಬಾಲಕರ ಕಾಲೇಜಿನಲ್ಲಿ ಈ ಕಳವು ಪ್ರಕರಣ ನಡೆದಿದ್ದು ಉಪನ್ಯಾಸಕ ವರ್ಗ ಕಳವು ಘಟನೆಯಿಂದ ಸದ್ಯ ಆತಂಕಕ್ಕೀಡಾಗಿದ್ದಾರೆ.
ಚಾಮರಾಜನಗರ: ಚಿನ್ನದಂಗಡಿ, ಮಳಿಗೆಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ಕಾಲೇಜಿಗೂ ಎಂಟ್ರಿ ಕೊಟ್ಟಿದ್ದು ಪರೀಕ್ಷಾ ಕೇಂದ್ರದ ಡಿವಿಆರ್, ಬ್ಯಾಟರಿ, ಟಿವಿಯನ್ನೇ ಹೊತ್ತೊಯ್ದಿದ್ದಾರೆ. ಚಾಮರಾಜನಗರ ಸರ್ಕಾರಿ ಪಿಯು ಬಾಲಕರ ಕಾಲೇಜಿನಲ್ಲಿ ಈ ಕಳವು ಪ್ರಕರಣ ನಡೆದಿದ್ದು ಉಪನ್ಯಾಸಕ ವರ್ಗ ಕಳವು ಘಟನೆಯಿಂದ ಸದ್ಯ ಆತಂಕಕ್ಕೀಡಾಗಿದ್ದಾರೆ.
ಗೇಟಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಪರೀಕ್ಷೆ ಮುನ್ನೆಚ್ಚರಿಕೆಗೆ ಅಳವಡಿಸಿದ್ದ
ಸಿಸಿಟಿವಿ ಡಿವಿಆರ್ ನ್ನು ಹಾಗೂ ಲಕ್ಷಾಂತರ ಮೌಲ್ಯದ 10 ಬ್ಯಾಟರಿಗಳು, ಎಲ್ ಇಡಿ ಟಿವಿಯನ್ನು ಹೊತ್ತೊಯ್ದಿದ್ದಾರೆ.
ಇದನ್ನೂ ಓದಿ: ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ರೈಲ್ವೆ ನೌಕರನ ಬಂಧನ..!
ಪ್ರಸ್ತುತ ಪಿಯು-3 ಪರೀಕ್ಷೆ ನಡೆಯುತ್ತಿದ್ದು ಈಗಾಗಲೇ 4 ವಿಷಯಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರದ ಡಿವಿಆರ್ ಕನ್ನ ಹಾಕಿರುವುದರಿಂದ ಪರೀಕ್ಷೆ ನಡೆದ ಪ್ರಮುಖ ದಾಖಲೆಯೇ ಇಲ್ಲದಂತಾಗಿದೆ.
ಪಿಯುಸಿ-3 ರ ಪರೀಕ್ಷೆಯಲ್ಲಿ ಈಗಾಗಲೇ 4 ವಿಷಯಗಳಿಗೆ ಎಕ್ಸಾಂ ಬರೆದಿರುವ ವಿದ್ಯಾರ್ಥಿಗಳು ಕೂಡ ಕಾಲೇಜಿಗೆ ಕನ್ನ ಹಾಕಿರುವುದರಿಂದ ದಿಗಿಲುಗೊಂಡಿದ್ದಾರೆ.
ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ಕೊಟ್ಟು ತನಿಖೆ ನಡೆಸಿದ್ದಾರೆ. ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಣ್ಣ ಚಾಮರಾಜನಗರ ಪಟ್ಟಣ ಠಾಣೆಗೆ ಈ ಸಂಬಂಧ ದೂರು ಕೊಟ್ಟಿದ್ದಾರೆ.
ಇದನ್ನೂ ಓದಿ: ನನಗೆ ಕನ್ಯೆ ಕೊಡಿಸಿ : ಜಿಲ್ಲಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಮೊರೆಯಿಟ್ಟ ಯುವಕ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.