ಬೆಂಗಳೂರು: ರಾಬರಿ, ಬೈಕ್ ಕಳ್ಳತನ ಹಾಗೂ ಕನ್ನ ಕಳವು ಪ್ರಕರಣ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 24 ಮಂದಿ ಆರೋಪಿಗಳನ್ನು ನಗರ ಕೇಂದ್ರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 30 ಪ್ರಕರಣಗಳನ್ನ‌ ಪತ್ತೆ ಹಚ್ಚಿ 1.32 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ವಾಹನ ಸೇರಿ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಶೇಷಾದ್ರಿಪುರ, ವೈಯ್ಯಾಲಿಕಾವಲ್, ಎಸ್.ಜೆ.ಪಾರ್ಕ್,ಕಬ್ಬನ್ ಪಾರ್ಕ್, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಬರಿ ಹಾಗೂ ಕಳ್ಳತ‌ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು 24 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 87 ಮೊಬೈಲ್ ಪೋನ್, 27 ದ್ವಿಚಕ್ರ ವಾಹನ, 340 ಗ್ರಾಂ ಚಿನ್ನ, 58 ಕೆಜಿ ಬೆಳ್ಳಿ, 7 ಕಾರು, 6.39 ಲಕ್ಷ ನಗದು ಹಾಗೂ ಆರೋಪಿಗಳ ಬ್ಯಾಂಕ್ ನಲ್ಲಿದ್ದ 7.50 ಲಕ್ಷ ನಗದು ಸೇರಿ ಒಟ್ಟು 1,32 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.


ಇದನ್ನೂ ಓದಿ- ಯುವತಿ ಮೇಲೆ ಆ್ಯಸಿಡ್ ದಾಳಿ: ನಾಳೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ


ಜಪ್ತಿಯಾದ 87 ಮೊಬೈಲ್ ಗಳ ಪೈಕಿ 10 ಮೊಬೈಲ್ ಗಳು ರಾಬರಿ‌ ಪ್ರಕರಣಕ್ಕೆ ಸೇರಿದೆ. ಇನ್ನುಳಿದ ಮೊಬೈಲ್ ಗಳ ಮಾಲೀಕರನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದೇವೆ ಪೊಲೀಸರು ಮಾಹಿತಿ ನೀಡಿದ್ದಾರೆ‌. ಆರೋಪಿಗಳು ಕದ್ದ ಬೈಕಿನಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುವವರನ್ನು ಟಾರ್ಗೆಟ್ ಮಾಡಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ 74 ಮೊಬೈಲ್ ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. 


ಇದನ್ನೂ ಓದಿ- ನಾನು ತಪ್ಪು ಮಾಡಿಲ್ಲ, ಗಲಾಟೆಯಲ್ಲಿ ಭಾಗಿಯಾಗಿಲ್ಲ: ಸುನಾಮಿ ಕಿಟ್ಟಿ


ಮೊಹಮ್ಮದ್ ಉಸ್ಮಾನ್, ಮಹಮ್ಮದ್ ಹುಸೇನ್, ತಬ್ರೇಜ್ ಖಾನ್ ಹಾಗೂ ಜುನೈದ್ ಮತ್ತು ಇರ್ಫಾನ್ ಪಾಷ ಬಂಧಿತ ಅರೋಪಿಗಳಾಗಿದ್ದಾರೆ‌. ಕಬ್ಬನ್ ಪಾರ್ಕ್,  ಅಶೋಕನಗರ, ಮಾಗಡಿ ರೋಡ್, ಸುದ್ದಗುಂಟೆ ಪಾಳ್ಯ, ಹೈಗ್ರೌಂಡ್ಸ್ ಹಾಗೂ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇರಿ ನಗರದ ಹಲವು ಠಾಣಾ ವ್ಯಾಪ್ತಿಯಲ್ಲಿ ರಾಬರಿ ಮಾಡಿದ್ದರು. ಪ್ರತಿ ಬಾರಿ ಕಳ್ಳತನ ಮಾಡುವಾಗ ಇಬ್ಬರು ಹೊಸ ಹುಡುಗರನ್ನು ಸೇರಿಸಿಕೊಳ್ಳುತ್ತಿದ್ದರು‌.‌ ಒಂದು ಮೊಬೈಲ್‌ ಕಳ್ಳತನ ಮಾಡಿದರೆ ಕನಿಷ್ಠ 500 ರೂಪಾಯಿ ಕಮೀಷನ್ ನೀಡುತ್ತಿದ್ದರು. ಕದ್ದ ಮೊಬೈಲ್ ಗಳನ್ನ ಜೆಜೆನಗರಕ್ಕೆ ಸಾಗಿಸಿ ಅಲ್ಲಿಂದ ಹೊರ ರಾಜ್ಯಗಳಿಗೆ ಬಿಡಿ-ಬಿಡಿಯಾಗಿ ಮಾರಾಟ ಮಾಡಿ ಶೋಕಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.