ಚಾಮರಾಜನಗರ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅದೇಶ ನೀಡಿದೆ.


COMMERCIAL BREAK
SCROLL TO CONTINUE READING

ಕೊಳ್ಳೇಗಾಲ ತಾಲೂಕಿನ‌ ದೊಡ್ಡಿಂದುವಾಡಿ ಗ್ರಾಮದ ಸತೀಶ್(24) ಶಿಕ್ಷೆಗೊಳಗಾದ ಅಪರಾಧಿ. 7 ವರ್ಷದ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದಲ್ಲದೇ ವಿಚಾರ ಬೇರೆಯವರಿಗೆ ತಿಳಿಸಿದರೇ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದನು.


ಇದನ್ನೂ ಓದಿ: ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದ ಚುನಾವಣಾ ಆಯೋಗ


ಘಟನೆ ಹಿನ್ನೆಲೆ: ಅಂಗಡಿಗೆ ತೆರಳಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಈತ  ಅತ್ಯಾಚಾರ ಎಸಗಿದ್ದರ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಕಳೆದ   2021 ರಂದು ಪ್ರಕರಣ ದಾಖಲಾಗಿತ್ತು. ವಾದ-ಪ್ರತಿವಾದ ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಾಮುಕನಿಗೆ ನ್ಯಾ.ಎ.ಸಿ.ನಿಶಾರಾಣಿ ಅವರು 20 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ.


ಜೊತೆಗೆ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 2 ಲಕ್ಷ ಪರಿಹಾರವನ್ನು 30 ದಿನದೊಳಗೆ ಕೊಡಬೇಕೆಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.