Crypto currency:ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಬಹುಕೋಟಿ ವಂಚನೆ!
Crypto currency: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಕೋಟ್ಯಾಂತರ ಹಣ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಪ್ಲಿಕೇಶನ್ ಒಂದರ ಹೆಸರಿನಲ್ಲಿ ಹುಕೋಟಿ ವಂಚನೆ ಮಾಡಿದ ಆರೋಪದಡಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಬಹುಕೋಟಿ ವಂಚನೆ ನಡೆದಿದೆ.
ಬೆಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಕೋಟ್ಯಾಂತರ ಹಣ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಪ್ಲಿಕೇಶನ್ ಒಂದರ ಹೆಸರಿನಲ್ಲಿ ಬಹುಕೋಟಿ ವಂಚನೆ ಮಾಡಿದ ಆರೋಪದಡಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಬಹುಕೋಟಿ ವಂಚನೆ ನಡೆದಿದೆ. ಕ್ರಿಪ್ಟೋ ಮೈನಿಂಗ್ ಯಂತ್ರ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಹೆಂಡತಿ ಟಾರ್ಚರ್ ತಾಳಲಾರದೆ ಚೈನ್ ಸ್ನಾಚ್.. ಕೊನೆಗೂ ಸಿಕ್ಕಿಬಿದ್ದ ಪತಿರಾಯ!
ಕೋವಿಡ್ - 2 ನೇ ಲಾಕ್ ಡೌನ್ ವೇಳೆ ಸಾಮಾಜಿಕ ಜಾಲತಾಣ ಮೂಲಕ HNT(HELIEAM CRIPTO TOKEN) ನೀಡುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರು ಸೇರಿ ವಿವಿಧ ರಾಜ್ಯಗಳಲ್ಲಿ ನೊಂದಾಯಿತ ಕಂಪನಿಗಳ ಮೂಲಕ ಹಣ ಹೂಡಿಕೆ ಮಾಡಲಾಗಿದೆ. 2022 ರ ಜನವರಿಯಲ್ಲಿ ಶೇರ್ ಷಾ ಅಪ್ಲಿಕೇಷನ್ ದೋಷಪೂರಿತವಾಗಿದೆ. ಅದನ್ನ ಅಪ್ಡೇಟ್ ಮಾಡಿ ಎಂದು ಸಂದೇಶ ರವಾನೆಯಾಗಿದೆ.
ಈ ಖದೀಮರು ಜನರಿಗೆ 2.0 ಹೊಸ ಅಪ್ಲಿಕೇಷನ್ ಬಿಡುಗಡೆ ಮಾಡುವುದಾಗಿ ಎಂದು ನಂಬಿಸಿದ್ದರು. ಹೇಳಿದ ಸಮಯಕ್ಕೆ ಅಪ್ಲಿಕೇಷನ್ ಅಪ್ಗ್ರೇಡ್ ಆಗಿಲ್ಲ, ಹೂಡಿಕೆದಾರರಿಗೆ ಯಾವುದೇ ರಿಟರ್ನ್ ನೀಡದೆ ಆದಾಯವನ್ನೂ ನೀಡದೆ ಕ್ರಿಪ್ಟೋ ಮೈನಿಂಗ್ ಯಂತ್ರವನ್ನೂ ನೀಡದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:"ಕತ್ತಲೆ ಮುಖವಾಡ - ಪರ್ಸಂಟೇಜ್ ಪಲ್ಲಕ್ಕಿಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಕಳಚಿ ಬೀಳಲಿದೆ"
1 ಕೆಜಿ 650 ಗ್ರಾಂ ಗೋಲ್ಡ್, 78ಲಕ್ಷ ಹಣ, 44 ಡಿಎಸ್‌ಸಿ (Digital signature certificate) ಸೇರಿದಂತೆ ಕಂಪನಿಗಳ ಸೀಲ್, ಮೊಬೈಲ್ ಫೋನ್, ಲ್ಯಾಪ್ ಟ್ಯಾಪ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.