ಚಿಕ್ಕಮಗಳೂರು: ವಿದ್ಯಾರ್ಥಿಯೊಬ್ಬ ಕೇವಲ 750 ರೂಪಾಯಿ ಸಾಲಕ್ಕೆ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಸಣ್ಣ ಮೊತ್ತದ ಸಾಲದ ಶೂಲಕ್ಕೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಮಗನ ಸಾವಿನಿಂದ ಮಾಜಿ ಯೋಧ ಗಳಗಳನೆ ಕಣ್ಣೀರಿಟ್ಟಿದ್ದಾರೆ.
ವಿದ್ಯಾರ್ಥಿಗೆ ಸಾಲ ಕೊಟ್ಟು ಹಾಸ್ಟೆಲ್ ಸಿಬ್ಬಂದಿ ಕಿರುಕುಳ ನೀಡಿದ್ರಾ ಅನ್ನೋ ಪ್ರಶ್ನೆ ಮೂಡಿದೆ. ಕೊಪ್ಪ ಖಾಸಗಿ ಶಾಲೆಯಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. 750 ರೂ. ಸಾಲ ಕೊಟ್ಟು 3 ಸಾವಿರ ರೂ. ಹಣ ಕೇಳಿರೋ ಆರೋಪ ಹಿನ್ನಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿವೆ: ಮಾಜಿ ಸಿಎಂ ಬೊಮ್ಮಾಯಿ
ವಿದ್ಯಾರ್ಥಿ ಬರೆದಿಟ್ಟಿರುವ ಡೆತ್ ನೋಟ್ ಏಕಾಏಕಿ ವೈರಲ್ ಆಗಿದೆ. ಆಗಸ್ಟ್ 22ರಂದು ಕೊಪ್ಪದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ಬರೆದಿಟ್ಟು ಕಡೂರು ತಾಲೂಕಿನ ಹಿರೇಬಳ್ಳೇಕೆರೆ ಗ್ರಾಮದ ವಿದ್ಯಾರ್ಥಿ ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿದ್ದ.
ಕೊಪ್ಪ ಪಟ್ಟಣದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ಡೆತ್ನೋಟ್ನಲ್ಲಿ ತನ್ನ ಸಾವಿಗೆ ಕಾರಣರಾದವರ ಬಗ್ಗೆ ತಿಳಿಸಿದ್ದಾನೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ನಡೆದಿದೆ.
ಇದನ್ನೂ ಓದಿ: ಬಿಜೆಪಿಗರು ಪ್ರಾಮಾಣಿಕರಾಗಿದ್ದರೆ ತನಿಖೆ ಬಗ್ಗೆ ಭಯವೇಕೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.