ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಆಕೆಯ ಶಾಲಾ ಬಸ್ ಚಾಲಕ ವಾಹನದೊಳಗೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಮಗುವಿನ ಪೋಷಕರ ಪ್ರಕಾರ ವಾಹನದೊಳಗೆ ಅತ್ಯಾಚಾರ ನಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಅಟೆಂಡರ್ ಅಲ್ಲಿಯೇ ಇದ್ದಳು ಎಂದು ಹೇಳಲಾಗುತ್ತಿದೆ.
ಶಾಲೆಯ ಆಡಳಿತ ಮಂಡಳಿಯು ವಿಷಯವನ್ನು ಮುಚ್ಚಿಡಲು ಪ್ರಯತ್ನಿಸಿದೆಯೇ ಎಂಬ ಪ್ರಶ್ನೆಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಶಾಲೆಯ ಆಡಳಿತದ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: Viral Video : ಫೈರ್ ಸ್ಟಂಟ್ ಮಾಡಲು ಹೋಗಿ ಮುಖ ಸುಟ್ಟುಕೊಂಡ ವ್ಯಕ್ತಿ!
ನಗರದ ಪ್ರಮುಖ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ಮಗು ಬಸ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಬಾಲಕಿ ಮನೆಗೆ ಮರಳಿದ ನಂತರ, ತನ್ನ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಸ್ಪೇರ್ ಸೆಟ್‌ನಿಂದ ಮಗುವಿನ ಬಟ್ಟೆಯನ್ನು ಯಾರೋ ಬದಲಾಯಿಸಿದ್ದನ್ನು ಆಕೆಯ ತಾಯಿ ಗಮನಿಸಿದ್ದಾರೆ. ನಂತರ ಆಕೆ ತನ್ನ ಮಗಳ ಕ್ಲಾಸ್ ಟೀಚರ್ ಮತ್ತು ಶಾಲೆಯ ಪ್ರಾಂಶುಪಾಲರನ್ನು ವಿಚಾರಿಸಿದ್ದರು. ಆದರೆ ಇಬ್ಬರೂ ಮಗುವಿನ ಬಟ್ಟೆಯನ್ನು ಬದಲಾಯಿಸಿಲ್ಲ ಎಂದು ಹೇಳಿದ್ದಾರೆ.
ಬಳಿಕ ಮಗು ತನ್ನ ಜನನಾಂಗದಲ್ಲಿ ನೋವಿನ ಬಗ್ಗೆ ಹೇಳಿಕೊಂಡಿದೆ. ಆಕೆಯ ಪೋಷಕರು ಆಕೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಕೆಗೆ ಕೌನ್ಸೆಲಿಂಗ್ ಮಾಡಿದ್ದು, ಈ ಸಂದರ್ಭದಲ್ಲಿ ಬಸ್ ಚಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಬಟ್ಟೆ ಬದಲಿಸಿದ್ದಾನೆ ಎಂದು ಆಕೆ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪೋಷಕರು ಅಧಿಕಾರಿಗಳಿಗೆ ದೂರು ನೀಡಲು ಮರುದಿನ ಶಾಲೆಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಮಗು ಚಾಲಕನನ್ನು ಗುರುತಿಸಿದೆ. ಬಾಲಕಿಯ ಪೋಷಕರು ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಿಧಿ ಸಕ್ಸೇನಾ ತಿಳಿಸಿದ್ದಾರೆ.
ಘಟನೆಯ ವೇಳೆ, ಮಗುವಿನ ಪೋಷಕರು ನೀಡಿದ ದೂರಿನ ಪ್ರಕಾರ, ಬಸ್‌ನಲ್ಲಿ ಮಹಿಳಾ ಅಟೆಂಡರ್ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಸದ್ಯ ಇಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್ 376-ಎಬಿ (12 ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಘಟನೆ ನಡೆದ ಸ್ಥಳವನ್ನು ಪತ್ತೆ ಮಾಡಲಾಗುತ್ತಿದ್ದು, ಸದ್ಯ ಬಾಲಕಿಯ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ.ದೂರಿನ ಮೇರೆಗೆ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: West Bengal : ದೀದಿ ಸರ್ಕಾರದ ವಿರುದ್ಧ ಪ್ರತಿಭಟ : ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಫೈಟ್
ಈ ಮಧ್ಯೆ, ಮಧ್ಯಪ್ರದೇಶದ ಕಾಂಗ್ರೆಸ್ ಮಾಧ್ಯಮ ವಿಭಾಗದ ಉಸ್ತುವಾರಿ ಕೆಕೆ ಮಿಶ್ರಾ ಅವರು ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿ ಸಚಿವ ನರೋತ್ತಮ್ ಮಿಶ್ರಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.