ಬೆಂಗಳೂರು : ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣ ಪ್ರಮುಖ ಆರೋಪಿ ರವಿಕುಮಾರ್ ಆಪ್ತ ಅನಿಲ್ ಎಂಬಾತ ಬಂಧಿತ. ಈತ ಮಹದೇವಪುರದಲ್ಲಿ ಚಿಲುಮೆ ಕಚೇರಿಯ ಉಸ್ತುವಾರಿ ವಹಿಸಿಕೊಂಡಿದ್ದ. ಹಲವು ವರ್ಷಗಳಿಂದ ರವಿಕುಮಾರ್ ಜೊತೆ ಗುರುತಿಸಿಕೊಂಡಿದ್ದ. ನೌಕರರ ನೇಮಕ ಹಾಗೂ ಲಾಜಿಸ್ಟಿಕ್ ವರ್ಕ್ ಸೇರಿದಂತೆ ಎಲ್ಲವೂ ಈತನ ಅಧೀನದಲ್ಲೆ ನಡೆಯುತಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅನಿಲ್ ತಲೆಮರೆಸಿಕೊಂಡಿದ್ದ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.
ಇದನ್ನೂ ಓದಿ : Voter ID Scam: ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?- ಕಾಂಗ್ರೆಸ್ ಪ್ರಶ್ನೆ
ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಬಿಬಿಎಂಪಿ ಅಧಿಕಾರಿಗಳನ್ನು ಬಂಧಿಸಿ ಮೂರು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಹಿರಿಯ ಅಧಿಕಾರಿಗಳು ಸಹಮತದಲ್ಲೇ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಬೆನ್ನಲೇ ಸಂಬಂಧಪಟ್ಟ ಐಎಎಸ್ ಅಧಿಕಾರಿಗಳನ್ನು ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿರುವ ರವಿಕುಮಾರ್ ಚಿಲುಮೆ ಸಂಸ್ಥೆ ಹಾಗೂ ಬ್ಯಾಂಕ್ ಖಾತೆಗಳ ಹಣಕಾಸಿನ ವ್ಯವಹಾರಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪಿಗಳ ಖಾತೆಯಿಂದ ಬಿಬಿಎಂಪಿ ಅಧಿಕಾರಿಗಳ ಬ್ಯಾಂಕ್ ಖಾತೆಗಳಿಗೆ ಹಣ ಸಂದಾಯವಾಗಿದೆ ಎಂಬುದರ ಬಗ್ಗೆ ಸಹ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ : ಸಿಸಿಬಿ ದಾಳಿ ವೇಳೆ ನಾಪತ್ತೆಯಾಗಿದ್ದ ಸೈಲೆಂಟ್ ಸುನೀಲ ವೇದಿಕೆ ಮೇಲೆ ಹಾಜರು .! ಕಣ್ಮುಂದೆ ಇದ್ರೂ ಸುಮ್ಮನಿದ್ದ ಪೊಲೀಸರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.