ಬಳ್ಳಾರಿ : ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣ ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕುರಿತು ಉಗ್ರರ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು ಬಳ್ಳಾರಿಯ ಜೀವೃತ್ತ ಮೈದಾನ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದರು.


ಇದನ್ನೂ ಓದಿ: ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ : ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ


ಅಲ್ಲದೆ, ಘಟನೆಗೆ ಎಲ್ ಇ ಡಿ ಇರುವಂತಹ ಸಲಕರಣೆಯ ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ್ಯ ವಿವರಗಳು ಲಭಿಸಿರುವುದರಿಂದ , ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬರುತ್ತದೆ. ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. 


ಇದನ್ನೂ ಓದಿ: ಮಂಗಳೂರು ಆಟೋ ಸ್ಫೋಟ ಉಗ್ರರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್


ವ್ಯಕ್ತಿಯು ಆಸ್ಪತ್ರೆಯಲ್ಲಿದ್ದು, ನಂತರ ಆ ವ್ಯಕ್ತಿಯಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿಯು ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು,  ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದ್ದು, ಇದು ಒಂದು ಭಯೋತ್ಪಾದಕ ಘಟನೆ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿರುವ ಬಗ್ಗೆ ಪೊಲೀಸರು ತಿಳಿಸದಿದ್ದಾರೆ. ಪಿಎಫ್ಐ ಗೂ, ಈ ಘಟನೆಗೂ ಸಂಬಂಧ ಇರುವ ಬಗ್ಗೆ ಮಾಹಿತಿಯೂ ತನಿಖೆಯ ನಂತರ ತಿಳಿಯಲಿದೆ ಎಂದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.