ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಸಿಎಂ ಸಿದ್ದರಾಮಯ್ಯ ಕರೆ
ಸರ್ಕಾರ ಬಂದು 8 ತಿಂಗಳ ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಾರ್ಷಿಕ ಸಮಾವೇಶ ಸಭೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರ ಬಂದು 8 ತಿಂಗಳ ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಾರ್ಷಿಕ ಸಮಾವೇಶ ಸಭೆ ನಡೆಸಿದ್ದಾರೆ. ಪೊಲೀಸರಿಗೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿ ಖಡಕ್ ಸೂಚನೆಯನ್ನ ಕೊಟ್ಟಿದ್ದಾರೆ ಸಿಎಂ. ಹಾಗಾದ್ರೆ ಇವತ್ತಿನ ಪೊಲಿಸ್ ಹಿರಿಯ ಅಧಿಕಾರಿಗಳೊಂದಿಗೆ ಯಾವೆಲ್ಲಾ ವಿಚಾರಗಳನ್ನ ಚರ್ಚೆ ಮಾಡಲಾಯ್ತು..? ಅಧಿಕಾರಿಗಳಿಗೆ ಸಿಎಂ ಕೊಟ್ಟ ಖಡಕ್ ಸೂಚನೆ ಏನು ಅಂತೀರಾ ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಗಳು ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿಚ ಪರಮೇಶ್ವರ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯ್ತು..ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಜಿಪಿ, ಎಡಿಜಿಪಿಗಳು, ಐಜಿಗಳು, ಡಿಐಜಿಗಳು, ಎಲ್ಲಾ ಎಸ್ ಪಿ,ಡಿಸಿಪಿಗಳು ಭಾಗಿಯಾಗಿದ್ರು.. ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಷ ಸಭೆ ನಡೆಸೋದಕ್ಕು ಮೊದಲು ವಾರ್ಷಿಕ ಸಮಾವೇಶ ಸಭೆಯಲ್ಲಿ ರಾಜ್ಯದ ತನಿಖಾ ವಿಶೇಷತೆಗಳ ಪ್ರದರ್ಶನ ಮಾಡಲಾಯ್ತು.. ರಾಜ್ಯದ ಬಾಂಬ್ ನಿಷ್ಕ್ರಿಯ ದಳ , ಗರುಡ ಪಡೆ, ಎಫ್ ಎಸ್ ಎಲ್ ಹಾಗೂ ಮೊಬೈಲ್ ಕಮಾಂಡ್ ಕಂಟ್ರೋ್ ಸೆಂಟರ್ ಪ್ರದರ್ಶನ,ಅದೇ ರೀತಿ ಪೊಲೀಸರು ವಶಕ್ಕೆ ಪಡೆದಿರುವ ಹಲವು ಮಾದರಿಯ ಮಾದಕ ವಸ್ತುಗಳ ಪ್ರದರ್ಶನ ಡ್ರಗ್ ಮುಕ್ತ ಕರ್ನಾಟಕ ಜಾಗೃತಿ ಕಾರ್ಯಕ್ರಮದ ಬಗ್ಗೆ ಪ್ರದರ್ಶನವನ್ನ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದ್ರು..
ಕಾರ್ಯಕ್ರಮದಲ್ಲಿ ವಿವಿಧ ಆಪ್ ಗಳಿಗೆ ಸಿಎಂ ಚಾಲನೆ ನೀಡಿದ್ರು.. ಐಟಿಪಿಎ ಸರಳ್ ,ಪೊಲೀಸ್ ಮಿತ್ರ ಚಾಟ್ ಬಾಕ್ಸ್, ಪೊಲೀಸ್ ಕುಟಂಬಗಳಿಗೆ ಅನುಕಂಪ ಅಧಾರದ ನೇಮಕಾತಿ ಪೋರ್ಟಲ್ , ksp.ai ಪೋರ್ಟಲ್ , ಫೈನಾನ್ಸಿಯಲ್ ವಿಶ್ಲೇಷಣೆ ಅಪ್ಲಿಕೇಶನ್, ಡೇಟಾತಾನ್ 24, ಸಿಐಡಿ ಕೋಡ್ ಹ್ಯಾಕಥಾನ್ ಲೋಕಾರ್ಪಣೆ ಮಾಡಲಾಯ್ತು .. ಇದೇ ವೇಳೆ ಸಂಕ್ಷಿಪ್ತ ಸೈಬರ್ ತನಿಖಾ ಕೈಪಿಡಿ ಕನ್ನಡದಲ್ಲಿ ಅಭಿವೃದ್ದಿ ಪಡಿಸಲಾದ ಪುಸ್ತಕ ಬಿಡುಗಡೆ ಮಾಡಿದ್ರು ಸಿಎಂ ಸಿದ್ದರಾಮಯ್ಯ..
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಿಎಂ ಇಂದು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಒಂದಿಷ್ಟು ಖಡಕ್ ಎಚ್ಚರಿಕೆಗಳನ್ನ ಸಿಎಂ ರವಾನಿಸಿದ್ರು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಿಸಿ ವೈಜ್ಞಾನಿಕವಾಗಿ ಸಮರ್ಥ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಬೇಕು..ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು ಇಲ್ಲದಿದ್ದರೆ ಹಿರಿಯ ಅಧಿಕಾರಿಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಅಂತಾ ಖಡಕ್ ಎಚ್ಚರಿಕೆಯನ್ನ ಕೊಟ್ರು ಸಿಎಂ.. ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗದಂತೆ ಅದು ಜನರಿಗೆ ಅನುಕೂಲ ಆಗುವಂತಿರಬೇಕು ಅಂತ ಸಿಎಂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ರು..
ಇನ್ನು ಕರ್ನಾಟಕ ಅಂತಾ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲು ನಿರ್ಧರಿಸಲಾಗಿದೆ.ಇನ್ನು ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಲು ಸಿಎಂ ಆದೇಶ ನೀಡಿದ್ದಾರೆ. ಜೊತೆಗೆ ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ವಹಿಸಲಯ ಮುಂದಾಗಿದ್ದು, ಈಗ ವಶಪಡಿಸಿಕೊಂಡಿರುವ 4484 ಗಾಂಜಾ ೨೩ ಕೆಜಿ ನಾಕೋಟಿಕ್ ಅನ್ನು ಫೆಬ್ರವರಿ ಮೊದಲ ವಾರದಲ್ಲಿ ನಾಶ ಮಾಡಲು ಸಿಎಂ ಸೂಚಿಸಿದ್ದಾರೆ.
ಇದನ್ನೂ ಓದಿ: ಶೀಘ್ರದಲ್ಲೇ ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ-ಸಿಎಂ ಭರವಸೆ
ಒಟ್ನಲ್ಲಿ ಎಫ್ ಐ ಆರ್ ಆದ ೬೦ ದಿನಗಳಲ್ಲೇ ಚಾರ್ಜ್ ಶೀಟ್ ಹಾಕಬೇಕು. ಆಗ ಮಾತ್ರ ಶಿಕ್ಷೆಯನ್ನ ಸರಿಯಾದ ರೀತಿಯಲ್ಲಿ ಕೊಡಿಸಲು ಸಾಧ್ಯವಾಗುತ್ತದೆ. ಇನ್ನು ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕಿದೆ ಎಂದು ಸಿಎಂ ಕಿವಿ ಮಾತು ಹೇಳಿದ್ದಾರೆ. ಜೊತೆಗೆ ಲೋಕಸಭಾ ಚುನಾವಣೆ ಹತ್ತಿರದಲ್ಲೇ ಇರೋದ್ರಿಂದ ಕೋಮುಗಲಭೆ, ರೌಡಿಶೀಟರ್ ಗಳ ಕೃತ್ಯಕ್ಕೆ ಬ್ರೇಕ್ ಹಾಕುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.