Big News: ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್ ಸವಾರ ಬಲಿ..!
ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಕೇರಳ ಮೂಲದ ಅರ್ಷದ್ (24) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಕಳೆದ ರಾತ್ರಿ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಸರಣಿ ಅಪಘಾತ ನಡೆದಿದೆ. ಗುಂಡಿ ತಪ್ಪಿಸಲು ರಸ್ತೆಯಲ್ಲಿ ಕಾರೊಂದು ಪಲ್ಟಿಯಾಗಿತ್ತು. ಈ ವೇಳೆ ಮುಂದೆ ಬರ್ತಿದ್ದ ಬೈಕ್ ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಕಾನ್ಸ್‌ಟೇಬಲ್ ಹುದ್ದೆಗೆ ಇಂಗ್ಲಿಷ್, ಹಿಂದಿಯಲ್ಲಿ ಪರೀಕ್ಷೆ: ಕನ್ನಡಿಗರ ಗತಿಯೇನು? ಎಂದು ಎಚ್‌ಡಿಕೆ ಪ್ರಶ್ನೆ
ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಕೇರಳ ಮೂಲದ ಅರ್ಷದ್ (24) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ರಾಹುಲ್‍ಗೆ ಗಂಭೀರ ಗಾಯಗಳಾಗಿವೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗುಂಡಿಗಳೇ ತುಂಬಿರುವ ರಸ್ತೆಯಿಂದ ಪದೇ ಪದೇ ಅಪಘಾತಗಳು ಆಗ್ತಿವೆ ಅಂತಾ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರು ಪಲ್ಟಿಯಾಗುವ ದೃಶ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಿಎಂ ಕಚೇರಿಯಲ್ಲಿ ಲಂಚ ಪಡೆಯುವ ಮತ್ತು ನೀಡುವ ಬೋರ್ಡ್ ಹಾಕಲಿ: ಕಾಂಗ್ರೆಸ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ