ಬೆಂಗಳೂರು: 2 ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು, ಕಾಲೇಜು ಉಪನ್ಯಾಸಕ ಹಾಗೂ ಶಾಲಾ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

ಮೃತರನ್ನು ನರಸಪ್ಪ(51) ಮತ್ತು ರಕ್ಷಾ(21) ಎಂದು ಗುರುತಿಸಲಾಗಿದೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ(ಆಗಸ್ಟ್ 15) ರಾತ್ರಿ 11.40ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.


ಇದನ್ನೂ ಓದಿ: ಅಲೆ ಬುಡಿಯೆರ್…! ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ‘ಕಂಬಳ’: ಕರಾವಳಿ ಸೊಬಗಿಗೆ ಅರಮನೆ ಮೈದಾನ ಸಾಕ್ಷಿ


ಈ ಅಪಘಾತಕ್ಕೆ ಚಂದನ್ ಎಂಬಾತನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗಿದೆ. ಕೆಂಗೇರಿ ಸಮೀಪದ ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಮೃತ ಯುವತಿ ರಕ್ಷಾಳ ಜೊತೆಗೆ ಚಂದನ್‌ ಪಲ್ಸರ್ ಬೈಕ್‌ನಲ್ಲಿ KLE ಕಾಲೇಜು ಕಡೆ ವೇಗವಾಗಿ ಹೋಗುತ್ತಿದ್ದನಂತೆ. ಈ ವೇಳೆ‌ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪನವರ ಬೈಕ್‍ಗೆ ರಭಸವಾಗಿ ಡಿಕ್ಕಿ ಹೊಡೆಸಿದ್ದಾನೆ.


ಪರಿಣಾಮ ಗಂಭೀರ ಗಾಯಗೊಂಡಿದ್ದ ನರಸಪ್ಪ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಳಿಗೆ ಗಂಭೀರ ಗಾಯಗಳಾಗಿತ್ತು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಗಿತ್ತು. ಆದರೆ ಆಸ್ಪತ್ರೆ ಸೇರಿಸುವಷ್ಟರಲ್ಲಿ ರಕ್ಷಾ ಸಾವನ್ನಪ್ಪಿದ್ದಾಳೆ. ಸದ್ಯ ಗಾಯಾಳು ಚಂದನ್‍ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯಸ್ವಾಮಿಗೆ ಮೊದಲ ಸ್ಥಾನ: ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ


ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.