ಮಂಡ್ಯ: ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಉಪನ್ಯಾಸಕರಿಗೆ ಲಾಂಗ್ ತೋರಿಸಿ ದರ್ಪ ತೋರಿದ್ದಾನೆ. ತರಗತಿಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಯ ಬಗ್ಗೆ ಆತನ ಪೋಷಕರಿಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದರು. ಇದರಿಂದ ಕುಪಿತನಾದ ವಿದ್ಯಾರ್ಥಿ ಲಾಂಗ್ ಸಮೇತ ಕಾಲೇಜಿಗೆ ಆಗಮಿಸಿ ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ.


COMMERCIAL BREAK
SCROLL TO CONTINUE READING

ಮಂಡ್ಯದ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮಾ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಆ19 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ಉದಯ್ ಗೌಡ (18) ಲಾಂಗ್ ತೋರಿಸಿದ ವಿದ್ಯಾರ್ಥಿಯಾಗಿದ್ದಾನೆ.


ಇದನ್ನೂ ಓದಿ: ತ್ಯಾಗವೀರ ಶ್ರೀ ಲಿಂಗರಾಜರ 118ನೇ ಸ್ಮರಣೋತ್ಸವ


ತಮಗೆ ಲಾಂಗ್ ತೋರಿಸಿದ ವಿದ್ಯಾರ್ಥಿ ಬಗ್ಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದಾರೆ. ಉಪನ್ಯಾಸಕರಿಗೆ ವಿದ್ಯಾರ್ಥಿ ಲಾಂಗ್ ತೋರಿಸಿರುವ ಘಟನೆಯ ಸಂಪೂರ್ಣ ದೃಶ್ಯವನ್ನು ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದ್ದಾರೆ.


ಈ ಬಗ್ಗೆ ಉಪನ್ಯಾಸಕ ಚಂದನ್ ಅವರು ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಂತರ ತನ್ನ ಪೋಷಕರೊಂದಿಗೆ ಬಂದು ಉದಯ್ ಗೌಡ ಕ್ಷಮೆಯಾಚಿಸಿದ್ದಾನೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: "ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು, ಅಪರಾಧ ಮುಕ್ತ ಸಮಾಜ ರೂಪಿಸಲು ಸಹಕರಿಸಿ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.