Hubballi News: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರೇ ದೊಡ್ಡಮನಿ ಕಾಲೊನಿಯಲ್ಲಿ ತಾವು ಬಾಡಿಗೆಗೆ ಇದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ- ಪೋಷಕರೇ ಹುಷಾರ್! ರಾಜ್ಯದ ಈ ಭಾಗದಲ್ಲಿ ಸಕ್ರಿಯವಾಗಿದೆ ಮಕ್ಕಳ ಅಪಹರಣಕಾರರ ಗ್ಯಾಂಗ್!


ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಸಂಗೊಳ್ಳಿ ಗ್ರಾಮದವರಾಗಿದ್ದ ಮಲ್ಲಿಕಾರ್ಜುನ ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದನ್ನೇ ಅತಿಯಾಗಿ ಮನಸ್ಸಿಗೆ ಹಚ್ಚಿಕೊಂಡ ಮಲ್ಲಿಕಾರ್ಜುನ ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ- ಡಬಲ್ ಮರ್ಡರ್ ಮಾಡಿ ಬಿಲ್ಡಪ್ ರೀಲ್ಸ್ ಹಾಕಿದ್ದ ಜೋಕರ್ ಫಿಲಿಕ್ಸ್ ಅಂದರ್


ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.