ಚಾಮರಾಜನಗರ: 41 ವರ್ಷದ ವಿವಾಹಿತ ಮಹಿಳೆ ಜೊತೆ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದ ಚಾಮರಾಜನಗರ ಪೂರ್ವ ಠಾಣೆಯ ಕಾನ್ಸ್‌ಟೇಬಲ್ ಅಶೋಕ್ ಎಂಬಾತ 20 ದಿನಗಳಿಂದ ನಾಪತ್ತೆಯಾಗಿದ್ದು ಮಹಿಳೆ ನ್ಯಾಯಕ್ಕಾಗಿ ಮಹಿಳಾ ಠಾಣೆ ಮೇಲೆರಿದ್ದಾಳೆ.‌


COMMERCIAL BREAK
SCROLL TO CONTINUE READING

ಏನಿದು ಪ್ರೇಮ್ ಕಹಾನಿ!?
ಚಾಮರಾಜನಗರ ತಾಲೂಕಿನ ಗ್ರಾಮವೊಂದರ 41 ವರ್ಷದ ಮಹಿಳೆ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಅಶೋಕ್ ಕಳೆದ 2020 ರಿಂದ ಪರಿಚಿತರಾಗಿದ್ದು ಪರಿಚಯ ಸಲುಗೆ ಪಡೆದುಕೊಂಡು ವಿವಾಹೇತರ ಸಂಬಂಧದ ತನಕ ಬಂದು ಮುಟ್ಟಿದೆ.


ಇವರ ಕಹಾನಿ ಮತ್ತಷ್ಟು ಗಟ್ಟಿಯಾದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಚಾಮರಾಜನಗರದಲ್ಲೇ ಮನೆ ಮಾಡಿ ಇಬ್ಬರೂ ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ, ಪೋಷಕರ ಒತ್ತಾಯದಿಂದ ಅಶೋಕ್ ಪ್ರೇಯಸಿ ಜೊತೆ ಅಂತರ ಕಾಯ್ದುಕೊಂಡು ಬೇರೆ ಮದುವೆಯಾಗಲು ತಯಾರಿ ನಡೆಸುತ್ತಿದ್ದು ತನಗೇ ಆತನ‌ ಜೊತೆಯೇ ಜೀವನ‌ ಸಾಗಿಸಬೇಕೆಂದು ವಿವಾಹಿತೆ ಪಟ್ಟು ಹಿಡಿದಿದ್ದಾಳೆ.


ಇದನ್ನೂ ಓದಿ-ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ : ಮುಖ್ಯಮಂತ್ರಿ ಸಿದ್ದರಾಮಯ್ಯ


ತಾಳಿ ಭಾಗ್ಯ ಕರುಣಿಸಿ ಕೈ ಕೊಟ್ಟ ಪೋಲಿಸಪ್ಪ..!?
ಪೊಲೀಸ್ ವಸತಿ‌ ನಿಲಯದಲ್ಲೇ ಇಬ್ಬರೂ ಲಿವಿಂಗ್ ಟುಗೆದರ್‌ನಲ್ಲಿದ್ದ ವೇಳೆ ದೇವರ ಫೋಟೋ ಮುಂದೆ ಅರಿಶಿನ ಕೊಂಬು ಕಟ್ಟಿದರಂತೆ ಅಶೋಕ್. ಜೊತೆಗೆ, ವಿವಾಹೇತರ ಸಂಬಂಧದ ವಾಟ್ಸ್ ಆ್ಯಪ್ ಚಾಟ್, ಫೋಟೋಗಳ ಜೊತೆ ಸಂತ್ರಸ್ತ ಮಹಿಳೆ ತನಗೇ ತನ್ನ ಪ್ರಿಯಕರ ಬೇಕು , ಆತನ‌ ಜೊತೆ ಜೀವನ ನಡೆಸಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.


ಸದ್ಯ, ಚಾಮರಾಜನಗರ ಮಹಿಳಾ ಠಾಣೆಯಲ್ಲಿ ಅಶೋಕ್ ಸೇರಿದಂತೆ ಅವರ ಪಾಲಕರ ವಿರುದ್ಧ ಮಹಿಳೆ ದೂರು ಕೊಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ-Kempe Gowda Jayanti: ರಾಜ್ಯದ 31 ಜಿಲ್ಲೆಗಳಲ್ಲೂ ‘ಕೆಂಪೇಗೌಡ ಜಯಂತಿ’ ಆಚರಣೆ- ಸಿಎಂ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l