Cricket Betting In Hubli: ವಿಶ್ವಕಪ್ ಆರಂಭವಾಗುತ್ತಲೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಪೊಲೀಸರು ಕೂಡ ಫುಲ್ ಅಲರ್ಟ್ ಆಗಿದ್ದು, ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ದಕ್ಷಿಣ ಆಫ್ರಿಕಾ ನೆದರ್ ಲೆಂಡ್  ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.‌


ಇದನ್ನೂ ಓದಿ- ಕ್ರಿಕೆಟ್ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ರವೀಂದ್ರ ಜಡೇಜಾ ಕಮಾಲ್, 1987ರ ಬಳಿಕ ಭಾರತೀಯರೊಬ್ಬರು ಈ ಸಾಧನೆ ಮಾಡಿರುವುದು ಇದೇ ಮೊದಲು


ನಗರದ  ಡಾಕಪ್ಪ ಸರ್ಕಲ್ ನಲ್ಲಿ ಐವರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಈ ಐವರಲ್ಲಿ ನವೀನ್, ಮಹಮ್ಮದ್, ಪವನ್ ಎಂಬುವವರನ್ನು ಬಂಧಿಸಲಾಗಿದ್ದು,ಸಂತೋಷ್ ಹಾಗೂ ಗಿರೀಶ್ ಎಂಬುವವರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. 


ಇದನ್ನೂ ಓದಿ- ಗೆದ್ದರೂ ಕಳಪೆ ದಾಖಲೆ ಬರೆದ ಭಾರತ: ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡಿರದ ಕೆಟ್ಟ ರೆಕಾರ್ಡ್ ಇದು…!


ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಡೆಯುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ‌ ಪೊಲೀಸರು ದಾಳಿ ಮಾಡಿದ್ದು, ಹುಬ್ಬಳ್ಳಿ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.