Crime News: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ, 8 ಮಂದಿ ಸಾವು!

Bengaluru Crime News: ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಠಾಣಾ ವ್ಯಾಪ್ತಿಯ ಮೇಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಳೆದ ತಿಂಗಳ 26ನೇ ತಾರೀಖು ಮಧ್ಯರಾತ್ರಿ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ.

Written by - Puttaraj K Alur | Last Updated : Apr 2, 2023, 12:21 PM IST
  • ಬೆಂಗಳೂರು ಹೊರಹೊಲಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ
  • ರೂಮ್‍ನಲ್ಲಿದ್ದ ಸಿಲಿಂಡರ್ ಸ್ಫೋಟವಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ
  • ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಠಾಣಾ ವ್ಯಾಪ್ತಿಯ ಮೇಡಿಹಳ್ಳಿಯಲ್ಲಿ ಘಟನೆ
Crime News: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ, 8 ಮಂದಿ ಸಾವು! title=
ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಂಗಳೂರು ಹೊರಹೊಲಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ರೂಮ್‍ನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಠಾಣಾ ವ್ಯಾಪ್ತಿಯ ಮೇಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಳೆದ ತಿಂಗಳ 26ನೇ ತಾರೀಖು ಮಧ್ಯರಾತ್ರಿ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದ 8 ಮಂದಿ ದಾರುಣವಾಗಿ ಸಾವನಪ್ಪಿದ್ದಾರೆ. ಸುಮಯ್ ಗುಪ್ತಾ, ತಿಲಕ್ ರಾಮ್, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ್, ನಿಕೋನ್ ಅನ್ಸಾರಿ ಮತ್ತು ಅಮಿತ್ ಕುಮಾರ್ ಸಾವನಪ್ಪಿದ್ದಾರೆ.

ಇದನ್ನೂ ಓದಿ: ಕರಕುಶಲ ಪರಂಪರೆಯ ಪುನರುಜ್ಜೀವನಕ್ಕೆ ಸಾಥ್ ನೀಡಿದ ಆರ್ಟ್ ಆಫ್ ಲಿವಿಂಗ್‌..!

ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಿಸದೆ ಪ್ರತಿನಿತ್ಯ ನಾಲ್ವರಂತೆ ದಾರುಣವಾಗಿ ಪ್ರಾಣಬಿಟ್ಟಿದ್ದಾರೆ. ಚಿಕ್ಕತಿರುಪತಿ ರಸ್ತೆಯ ಮೇಡಿಹಳ್ಳಿಯಲ್ಲಿ ಭಾಸ್ಕರ್ ಎಂಬುವರ ರೂಮ್ ನಲ್ಲಿ 8 ಮಂದಿ ಯುವಕರು ವಾಸವಾಗಿದ್ದರು. ಎಲ್ಲರೂ ಬಿಹಾರ ಮೂಲದವರಾಗಿದ್ದು, 1 ವರ್ಷದಿಂದ ಮೇಡಿಹಳ್ಳಿಯಲ್ಲಿ ವಾಸವಾಗಿದ್ದರು.

ಚಿಕ್ಕ ಅಂಗಡಿ ರೂಮ್‍ನಂತಿದ್ದು, ಅದರಲ್ಲಿ 8 ಮಂದಿ ವಾಸವಾಗಿದ್ದರು. ಎಲ್ಲರೂ ಒಂದೇ ಕಡೆ ಗಾರ್ಮೆಂಟ್ಸ್ ಫ್ಯಾಕ್ಟರಿಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. 27ನೇ ತಾರೀಖು ಇಬ್ಬರ ಸಾವನ್ನಪ್ಪಿದ್ರೆ, ಆ ಬಳಿಕ ಮತ್ತೊಬ್ಬ ಪ್ರಾಣಬಿಟ್ಟಿದ್ದಾನೆ. ಆ ನಂತರ 2 ದಿನ ಕಳೆದ ಮೇಲೆ ನಾಲ್ವರು ಸಾವನ್ನಪ್ಪಿದ್ದಾರೆ. ಮೊನ್ನೆ ರಾತ್ರಿ ಅನ್ಸಾರಿ ಎಂಬ ಯುವಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆಂದು ತಿಳಿದುಬಂದಿದೆ.

ಇದನ್ನೂ ಓದಿ: Koppal: 105KG ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ವ್ಯಕ್ತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News