Kalaburagi: ಹಾಡಹಗಲೇ ವಕೀಲನ ಬರ್ಬರ ಹತ್ಯೆ..!

Crime News in Kalaburagi: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Written by - Puttaraj K Alur | Last Updated : Dec 7, 2023, 01:09 PM IST
  • ಕಲಬುರಗಿ ನಗರದಲ್ಲಿ ಹಾಡಹಗಲೇ ವಕೀಲನ ಭೀಕರ ಹತ್ಯೆ
  • ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುಷ್ಕರ್ಮಿಗಳು
  • ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ
Kalaburagi: ಹಾಡಹಗಲೇ ವಕೀಲನ ಬರ್ಬರ ಹತ್ಯೆ..! title=
ವಕೀಲನ ಭೀಕರ ಹತ್ಯೆ..!

ಕಲಬುರಗಿ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಮಾಡಿರುವ ಘಟನೆ ಕಲುಬುರಗಿಯಲ್ಲಿ ನಡೆದಿದೆ. ನಗರದ ಸಾಯಿ ಮಂದಿರ ಬಳಿ ಈರಣ್ಣಗೌಡ ಪಾಟೀಲ್(40) ಎಂಬುವರನ್ನು ಕೊಲೆ ಮಾಡಲಾಗಿದೆ.

ಬೈಕ್ ಮೇಲೆ ಕೋರ್ಟ್‍ಗೆ ಹೋಗುವಾಗ ಕಣ್ಣಿಗೆ ಕಾರದ ಪುಡಿ ಎರಚಿದ ಹಂತಕರು ನಂತರ ಈರಣ್ಣಗೌಡರ ಮೇಲೆ ಹಲ್ಲೆ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಓಡಿಹೋದ ಅವರು ಖಾಸಗಿ ಅಪಾರ್ಟ್‍ಮೆಂಟ್‍ಗೆ ಹೋಗಲು ಪ್ರಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ಅವರ ಬೆನ್ನು ಹತ್ತಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: KSRTC ಸೆಕ್ಯುರಿಟಿ ಹುಸೇನಪ್ಪ ಕೊಲೆ: ಕರಾಟೆ ತರಬೇತಿದಾರ ಕಟ್ಟೆಸ್ವಾಮಿ ಮತ್ತೋರ್ವ ಸೆರೆ

ಅವರು ಕೆಳಗೆ ಬಿದ್ದತಕ್ಷಣ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಕಲಬುರಗಿ ಪೊಲೀಸ್ ಕಮಿಷನರ್ ಆರ್.ಚೇತನ ಸಹ ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದವರ ಬಂಧನ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News