Kalaburagi: ಹಾಡಹಗಲೇ ವಕೀಲನ ಬರ್ಬರ ಹತ್ಯೆ..!
Crime News in Kalaburagi: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಮಾಡಿರುವ ಘಟನೆ ಕಲುಬುರಗಿಯಲ್ಲಿ ನಡೆದಿದೆ. ನಗರದ ಸಾಯಿ ಮಂದಿರ ಬಳಿ ಈರಣ್ಣಗೌಡ ಪಾಟೀಲ್(40) ಎಂಬುವರನ್ನು ಕೊಲೆ ಮಾಡಲಾಗಿದೆ.
ಬೈಕ್ ಮೇಲೆ ಕೋರ್ಟ್‍ಗೆ ಹೋಗುವಾಗ ಕಣ್ಣಿಗೆ ಕಾರದ ಪುಡಿ ಎರಚಿದ ಹಂತಕರು ನಂತರ ಈರಣ್ಣಗೌಡರ ಮೇಲೆ ಹಲ್ಲೆ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಓಡಿಹೋದ ಅವರು ಖಾಸಗಿ ಅಪಾರ್ಟ್‍ಮೆಂಟ್‍ಗೆ ಹೋಗಲು ಪ್ರಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ಅವರ ಬೆನ್ನು ಹತ್ತಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: KSRTC ಸೆಕ್ಯುರಿಟಿ ಹುಸೇನಪ್ಪ ಕೊಲೆ: ಕರಾಟೆ ತರಬೇತಿದಾರ ಕಟ್ಟೆಸ್ವಾಮಿ ಮತ್ತೋರ್ವ ಸೆರೆ
ಅವರು ಕೆಳಗೆ ಬಿದ್ದತಕ್ಷಣ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಕಲಬುರಗಿ ಪೊಲೀಸ್ ಕಮಿಷನರ್ ಆರ್.ಚೇತನ ಸಹ ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದವರ ಬಂಧನ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.