ಮಂಡ್ಯ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಯುವಕನೊಬ್ಬ ಹಲ್ಲೆ‌ ಮಾಡಿದ್ದಾನೆ. ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದಾಗಿ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ.


COMMERCIAL BREAK
SCROLL TO CONTINUE READING

ಮಿಮ್ಸ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿದೆ. ಮಂಡ್ಯ ತಾಲೂಕಿನ ವೈಯರಹಳ್ಳಿ ಗ್ರಾಮದ ನವ್ಯಾಳಿಗೆ ಅದೇ ಗ್ರಾಮದ ಯುವಕ ಸಂಪತ್ ಎಂಬಾತ ಹಲ್ಲೆ ನಡೆಸಿದ್ದಾನೆ. ಸಂಪತ್ ನ್ಯಾವಳಿಗೆ ಸಂಬಂಧಿಯಾಗಬೇಕು. ಕಳೆದ ಹಲವಾರು ದಿನಗಳಿಂದ ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದ.


ಇದನ್ನೂ ಓದಿ: Davanagere: ಕೋಳಿ ಸಾಂಬಾರ್ ಮಾಡಿಲ್ಲ ಎಂದು ಪತ್ನಿ ಕೊಲೆ..!


ಇಂಟರ್ನಲ್ ಪರೀಕ್ಷೆ ಮುಗಿಸಿ ವಾಪಸ್ ಆಗುವ ವೇಳೆ ಆಸ್ಪತ್ರೆ ಆವರಣದಲ್ಲಿ ಯುವತಿಯನ್ನು ಅಡ್ಡಗಟ್ಟಿದ ಯುವಕ ಹಲ್ಲೆ ಮಾಡಿದ್ದಾನೆ. ಹಲ್ಲೆ ನಡೆಸುತ್ತಿದ್ದ ವೇಳೆ ಸ್ಥಳೀಯರು ಮತ್ತು ಸಾರ್ವಜನಿಕರು ಮಧ‍್ಯಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಹಲ್ಲೆ ಮಾಡಿದ ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ಎರಡು ತಲೆ ಹಾವು: ಸಚಿವ ಶ್ರೀರಾಮುಲು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.