ಮೈಸೂರು: ಮೈಸೂರು ವಿವಿಯ ಮಾನಸ ಗಂಗೋತ್ರಿ ಕ್ಯಾಂಪಸ್​ನಲ್ಲಿ ಕೇಂದ್ರ ಇಂಟಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಕೊಲೆಯಾಗಿದೆ. ಆರ್.ಎಸ್. ಕುಲಕರ್ಣಿ (83) ಕೊಲೆಯಾದ ನಿವೃತ್ತ ಅಧಿಕಾರಿಯಾಗಿದ್ದಾರೆ.


ಶುಕ್ರವಾರ ಸಂಜೆ ಗಂಗೋತ್ರಿ ಕ್ಯಾಂಪಸ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ಆರ್.ಎನ್. ಕುಲಕರ್ಣಿಯವರು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳು ಆ್ಯಕ್ಸಿಡೆಂಟ್​ ಮಾಡಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆಂದು ಹೇಳಲಾಗಿದೆ.


ಇದನ್ನೂ ಓದಿ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ, ಶಿಶುಗಳ ಸಾವು: ಸಚಿವ ಸುಧಾಕರ್ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ


COMMERCIAL BREAK
SCROLL TO CONTINUE READING

ಕಾರಿನಿಂದ ಡಿಕ್ಕಿ ಹೊಡೆಸಿ ಕುಲಕರ್ಣಿಯವರನ್ನು ಹತ್ಯೆ ಮಾಡಲಾಗಿದೆ. ಕಾರು ಡಿಕ್ಕಿ ಹೊಡೆಸಿದ ಕೂಡಲೇ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. ಮೇಲ್ನೋಟಕ್ಕೆ ಇದೊಂದು ಹಿಟ್ ಅಂಡ್ ರನ್ ಪ್ರಕರಣವೆಂದು ಭಾವಿಸಿದ್ದ ಪೊಲೀಸರಿಗೆ ದಿಗ್ಬ್ರಮೆಯಾಗಿದೆ. ಭಾನುವಾರ ಬೆಳಿಗ್ಗೆ ಸಿಸಿಟಿವಿ ಪರಿಶೀಲಿಸಿದಾಗ ಭಯಾನಕ ಸತ್ಯ ಬಯಲಾಗಿದೆ.


ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತೆ; ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ಪ್ರಶ್ನೆ


ಈ ಬಗ್ಗೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದೇವೆ, ಎಸಿಪಿ ನೇತೃತ್ವದಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ. ಶೀಘ್ರವೇ ಪ್ರಕರಣ ಬೇಧಿಸಲಿದ್ದೇವೆ ಎಂದು ಮೈಸೂರು ನಗರ  ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೇಳಿದ್ದಾರೆ.


ಕುಲಕರ್ಣಿಯವರು ನಿವೃತ್ತರಾಗಿ 23 ವರ್ಷಗಳಾಗಿವೆ. ಕೊಲೆಗೆ ವೃತ್ತಿ ವೈಷಮ್ಯ ಅಥವಾ ವೈಯಕ್ತಿಕ ವೈಷಮ್ಯ ಕಾರಣವೇ.? ಸದ್ಯ ಏನು ಅಂತಾ ಈಗಲೇ ಏನೂ ಹೇಳಲಾಗದು. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.