ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲು
ಘಟನೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಕೊತ್ತನೂರು ಠಾಣೆ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಕೆರೆಯಲ್ಲಿಈಜಲು ಹೋಗಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ ಸಂಪಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಾಗಾವಾರ ಬಳಿಯ ಸಾರಾಯಿಪಾಳ್ಯದ ದೊಡ್ಡಗುಬ್ಬಿ ಕೆರೆಗೆ ಐವರು ಯುವಕರು ತೆರಳಿದ್ದರು. ಈಜಾಡುತ್ತಿದ್ದಾಗ ಇಮ್ರಾನ್ ಪಾಷಾ (19), ಮುಬಾರಕ್ (18) ಸಾಹಿಲ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಮೂವರು ಯುವಕರು ಮುಳುಗಿದ್ದನ್ನು ಗಮನಿಸಿದ ಕೆರೆಯ ದಡದಲ್ಲಿದ್ದ ಅಬ್ದುಲ್ ರೆಹಮಾನ್(18) ಮತ್ತು ಶಾಹಿದ್(17) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: DK Sivakumar : 'ಒಂದು ಬಿಜೆಪಿಯವರಿಗೆ ಶರಣಾಗಬೇಕು, ಇಲ್ಲ ಅವರ ಜೊತೆ ಸೇರಿಕೊಳ್ಳಬೇಕು'
ಸಂಜೆ 4.30ರ ಸುಮಾರಿಗೆ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಕೊತ್ತನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಜಾಡಲು ಹೋಗಿದ್ದ ಐವರು ಯುವಕರ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಯುವಕರು ಬದುಕುಳಿದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲಾ ಯುವಕರು ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ರಾತ್ರಿ 7 ಗಂಟೆವರೆಗೆ ಶೋಧ ಕಾರ್ಯಾಚರಣೆ ನಡೆಸಿದ್ರೂ ಯಾರೊಬ್ಬರ ಸುಳಿವು ಪತ್ತೆಯಾಗಿರಲಿಲ್ಲ. ಕತ್ತಲಾಗಿದ್ದರಿಂದ ಶೋಧ ಕಾರ್ಯ ಸ್ಥಗಿತಗೊಳಿಸಿದ್ದು, ಶುಕ್ರವಾರ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ಸದ್ಯ ಕೆರೆಯಲ್ಲಿ ಮುಳುಗಿರುವ ಯುವಕರ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಕೊತ್ತನೂರು ಠಾಣೆ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: RSS ಮೆಚ್ಚಿಸಲು ಬಿಜೆಪಿ ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ: ಕಾಂಗ್ರೆಸ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.