ಚರ್ಚ್ ಮೇಲೆ ದಾಳಿ: ಬಾಲ ಯೇಸುವಿನ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು
ಕಿಡಿಗೇಡಿಗಳು ಚರ್ಚ್ ನ ಹೊರಭಾಗದಲ್ಲಿ ನಿರ್ಮಿಸಲಾಗಿರುವ ಬಾಲ ಯೇಸುವಿನ ಪ್ರತಿಮೆ ಮುಂಭಾಗದಲ್ಲಿದ್ದ ಹೂ ಕುಂಡಗಳನ್ನು ಒಡೆದು ಹಾಕಿ ಸಮೀಪದಲ್ಲಿಯೇ ಇದ್ದ 3 ಹಣದ ಹುಂಡಿ ಕದ್ದೊಯ್ದಿದ್ದಾರೆ.
ಮೈಸೂರು: ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸೇಂಟ್ ಮೇರಿ ಚರ್ಚ್‍ನೊಳಗೆ ನುಗ್ಗಿದ ದುಷ್ಕರ್ಮಿಗಳು, ಆವರಣದಲ್ಲಿದ್ದ ಬಾಲ ಯೇಸುವಿನ ಪ್ರತಿಮೆ ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಮೈಕ್ ಹಾಗೂ ಹುಂಡಿ ಕಳವು ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ಮಂಗಳವಾರ ಬೆಳಗಿನ ಪೂಜೆಯ ನಂತರ ಚರ್ಚ್ ಫಾದರ್ ಜಾನ್ ಪೌಲ್ ಕರ್ತವ್ಯ ನಿಮಿತ್ತ ಮೈಸೂರಿಗೆ ತೆರಳಿದ್ದರು. ಚರ್ಚ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯು ಸಹ ರಜೆ ನಿಮಿತ್ತ ಮನೆಗೆ ತೆರಳಿದ್ದರು. ಸಂಜೆ 6 ಗಂಟೆ ವೇಳೆ ಚರ್ಚ್‍ನ ಸಿಬ್ಬಂದಿ ರಾಜಣ್ಣ ಎಂಬುವವರು ಲೈಟ್ ಹಾಕಲು ಬಂದಾಗ ಚರ್ಚ್ ಹಿಂಭಾಗದ ಬಾಗಿಲು ತೆರೆದಿರುವುದು ಹಾಗೂ ಹೂ ಕುಂಡ ಒಡೆದು ಹಾಕಿರುವುದು ಗಮನಕ್ಕೆ ಬಂದಿತ್ತು.
ಇದನ್ನೂ ಓದಿ: ಕಾರು ಅಪಘಾತ: ಮೋದಿ ಸಹೋದರನ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು
ಇದರಿಂದ ಆತಂಕಗೊಂಡ ರಾಜಣ್ಣ ಕೂಡಲೇ ಚರ್ಚ್‌ನ ಲೈಟ್ ಹಾಕಿ ಗಮನಿಸಿದಾಗ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಚರ್ಚ್‍ನ ಒಳಭಾಗದಲ್ಲಿ ವಿಶೇಷವಾಗಿ ನಿರ್ಮಿಸಿದ್ದ ಬಾಲ ಯೇಸುವಿನ ತೊಟ್ಟಿಲು ಮತ್ತು ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಬಾಲಯೇಸುವಿನ ತೊಟ್ಟಿಲನ್ನು ವೇದಿಕೆಯ ಮೇಲಿಂದ ಮುಂಭಾಗಕ್ಕೆ ಬಿಸಾಕಿರುವುದು ಕಂಡುಬಂದಿದೆ. ಬಾಲ ಯೇಸುವಿನ ಪ್ರತಿಮೆಯೊಂದಿಗೆ ಅಲಂಕಾರಕ್ಕೆ ಜೋಡಿಸಲ್ಪಟ್ಟಿದ್ದ ಗಾಜಿನ ಪದಾರ್ಥಗಳನ್ನು ಸಹ ಎಲ್ಲೆಂದರಲ್ಲಿ ಎಸೆದು ಹೋಗಿದ್ದಾರೆ. ಚರ್ಚ್‍ನಲ್ಲಿ ಯಾರೂ ಇಲ್ಲದ ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.
ಕಿಡಿಗೇಡಿಗಳು ಚರ್ಚ್ ನ ಹೊರಭಾಗದಲ್ಲಿ ನಿರ್ಮಿಸಲಾಗಿರುವ ಬಾಲ ಯೇಸುವಿನ ಪ್ರತಿಮೆ ಮುಂಭಾಗದಲ್ಲಿದ್ದ ಹೂ ಕುಂಡ ಗಳನ್ನು ಒಡೆದು ಹಾಕಿ ಸಮೀಪದಲ್ಲಿಯೇ ಇದ್ದ ಹಣದ 3 ಹುಂಡಿಗಳನ್ನು ಕದ್ದೊಯ್ದಿದ್ದಾರೆ. ಚರ್ಚ್‍ನ ಮತ್ತೊಂದು ಬದಿಯ ಬಾಗಿಲನ್ನು ತೆರೆಯಲು ಪ್ರಯತ್ನಿಸಿರುವ ದುಷ್ಕರ್ಮಿಗಳು ದೊಡ್ಡ ಇಟ್ಟಿಗೆಯಿಂದ ಬಾಗಿಲನ್ನು ಒಡೆಯುವ ಪ್ರಯತ್ನ ಮಾಡಿರುವುದು ಕಂಡುಬಂದಿದೆ.
ಇದನ್ನೂ ಓದಿ: ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿ, ಸ್ಥಳದಲ್ಲಿಯೇ ಮೂವರ ಸಾವು
ಸದ್ಯ ಘಟನೆ ಸಂಬಂಧ ಚರ್ಚ್ ಫಾದರ್ ಜಾನ್ ಪೌಲ್ ಅವರು ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಇನ್ಸ್ಪೆಕ್ಟರ್ ಶ್ರೀಧರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.