Athani Accident: ಅಮಿತ್‌ ಶಾ ಕಾರ್ಯಕ್ರಮ ಮುಗಿಸಿ ಮರಳುವಾಗ ಅಫಘಾತ.. ಓರ್ವ ಸಾವು, 7 ಕ್ಕೂ ಹೆಚ್ಚು ಜನರಿಗೆ ಗಾಯ

Athani Accident: ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರ್ಜರಿ ಪ್ರಚಾರ ನಡೆಸಿದರು. ಅಮಿತ್‌ ಶಾ ಆಗಮನ ಹಿನ್ನೆಲೆ ಸಾವಿರಾರಿ ಜನ ಜಮಾಯಿಸಿದ್ದರು. ಈ ಕಾರ್ಯಕ್ರಮ ಮುಗಿಸಿ ವಾಪಸ್‌ ತೆರಳುವಾಗ ಅಫಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದಾರೆ.   

Written by - Chetana Devarmani | Last Updated : May 7, 2023, 12:57 PM IST
  • ಅಮಿತ್‌ ಶಾ ಕಾರ್ಯಕ್ರಮ ಮುಗಿಸಿ ಮರಳುವಾಗ ಅಫಘಾತ
  • ಓರ್ವ ಸಾವು, 7 ಕ್ಕೂ ಹೆಚ್ಚು ಜನರಿಗೆ ಗಾಯ
  • ಐಗಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ
Athani Accident: ಅಮಿತ್‌ ಶಾ ಕಾರ್ಯಕ್ರಮ ಮುಗಿಸಿ ಮರಳುವಾಗ ಅಫಘಾತ.. ಓರ್ವ ಸಾವು, 7 ಕ್ಕೂ ಹೆಚ್ಚು ಜನರಿಗೆ ಗಾಯ  title=

ಅಥಣಿ (ಬೆಳಗಾವಿ): ನಿನ್ನೆ ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ‌ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಏಳಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 

ಇದನ್ನೂ ಓದಿ: ಚುನಾವಣೆಗೆ ಕೌಂಟ್ ಡೌನ್ ಶುರು: ಉದ್ಯಾನನಗರಿಯಲ್ಲಿ ಭರ್ಜರಿ ಪ್ರಚಾರ

ಕ್ರೂಸರ್‌ನಲ್ಲಿ ಅಥಣಿಯಿಂದ ಕೊಟ್ಟಲಗಿಗೆ ತೆರಳುವಾಗ ಮಾರ್ಗ ಮಧ್ಯದಲ್ಲಿ ಅಪಘಾತ ಜರುಗಿದೆ. ಕೊಟ್ಟಲಗಿ - ಕಕಮರಿ ಮಧ್ಯದಲ್ಲಿ ಕ್ರೂಸರ್ ಡ್ರೈವರ ತಪ್ಪಿನಿಂದ ಕ್ರೂಸರ್ ಪಲ್ಟಿಯಾಗಿದೆ. ಕೊಟ್ಟಲಗಿ ಗ್ರಾಮದ ಶಿವಪುತ್ರ ರಾಮು ಬಂಡರಬಟ್ಟಿ (20) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಗಾಯಾಳುಗಳಾದ ಬಸು ಸಿದ್ದಪ್ಪ ಗುಂಡಗೇರಿ, ದುಂಡಪ್ಪ ಗುಂಡಗೇರಿ, ರಾಜು ಸಿದರಾಯ ಬಂಡರಬೇಟಿ, ಅಭಿಷೇಕ ಸಿಂಧೂರ ಸೇರಿದಂತೆ ಏಳಕ್ಕೂ ಹೆಚ್ಚು ಗಾಯಾಳುಗಳನ್ನು ಅಥಣಿಯ ಪಾಂಗಿ ಆಸ್ಪತ್ರೆ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಗಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. 

ಇದನ್ನೂ ಓದಿ: ಮೋದಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾದ ಹಾವೇರಿ ಬಿಜೆಪಿ ನಾಯಕರು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News