ಹೋಟೆಲ್‍ನಲ್ಲಿ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್!

Kumbam Shivakumar Reddy: ಪ್ರಕರಣ ಸಂಬಂಧ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್​ ಜಿಲ್ಲಾ ಘಟಕದ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Written by - Puttaraj K Alur | Last Updated : Sep 3, 2023, 12:23 PM IST
  • ತೆಲಂಗಾಣ ಕಾಂಗ್ರೆಸ್ ಮುಖಂಡನ ವಿರುದ್ಧ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ
  • ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರಿಂದ ನೋಟಿಸ್
  • ಖಾಸಗಿ ಹೋಟೆಲ್‍ನಲ್ಲಿ ಜ್ಯೂಸ್​ನಲ್ಲಿ ಮತ್ತು ಬರೆಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸಿದ ಆರೋಪ
ಹೋಟೆಲ್‍ನಲ್ಲಿ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್! title=
ಕಾಂಗ್ರೆಸ್ ಮುಖಂಡನಿಗೆ ನೋಟಿಸ್!

ಬೆಂಗಳೂರು: ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ತೆಲಂಗಾಣಕ್ಕೆ ತೆರಳಿದ ಕಬ್ಬನ್ ಪಾರ್ಕ್ ಪೊಲೀಸರು ವಿಚಾರಣೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ​ ಜ್ಯೂಸ್​ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ತನ್ನ ಮೇಲೆ ಅತ್ಯಾಚಾರ ಮಾಡಲಾಗಿದ್ದು, ವಿಡಿಯೋ ರಿಲೀಸ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.

ಇದನ್ನೂ ಓದಿ: ಪೊಲೀಸಪ್ಪನಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ.. ರಕ್ಷಣೆ ನೀಡಬೇಕಿದ್ದ ಆರಕ್ಷಕನಿಂದಲೇ ಟಾರ್ಚರ್!

ಪ್ರಕರಣ ಸಂಬಂಧ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್​ ಜಿಲ್ಲಾ ಘಟಕದ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ರೆಡ್ಡಿಗೆ ನೋಟಿಸ್ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗಲು ತನಗೆ ಒಂದು ವಾರ ಸಮಯ ಬೇಕು ಅಂತಾ ಶಿವಕುಮಾರ್ ರೆಡ್ಡಿ ಕೇಳಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್ ಮಾಡುವ ಆಂಟಿಯರೇ ಟಾರ್ಗೆಟ್: ಫೇಕ್ ಐಡಿಯಲ್ಲಿ ಪಟಾಯಿಸಿ ಚಕ್ಕಂದವಾಡ್ತಿದ್ದ ಖದೀಮ ಅಂದರ್

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News