ಮೈಸೂರು: ಮೈಸೂರಿನ ಅಗ್ನಿಶಾಮಕ ವಸತಿ ಗೃಹದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ ಗಾಯಗಳಾಗಿದೆ.


COMMERCIAL BREAK
SCROLL TO CONTINUE READING

ಘಟನೆಯಲ್ಲಿ ಗೃಹಿಣಿ ಗೀತಾ(34)ರಿಗೆ ಗಂಭೀರ ಗಾಯವಾಗಿದೆ. ಅವರ ಪುತ್ರಿ ಮೌನ(10), ಪುತ್ರ ಮಿಥುನ್(6) ಹಾಗೂ ಪಕ್ಕದ ಮನೆ ಸವಿತಾ (38)  ಭಾಗ್ಯಮ್ಮ(62)ರಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಸೇರಿ 5 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಾರಿನಲ್ಲಿದ್ದ ಮೊಬೈಲ್ ಸ್ಪೋಟ..!


ಮಂಗಳವಾರ(ಜ.3) ರಾತ್ರಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿತ್ತು. ಇಂದು ಬೆಳಗ್ಗೆ 7.15ರ ವೇಳೆ ಮೈಸೂರಿನ ಬನ್ನಿಮಂಟಪದ ಬಳಿ ಇರುವ ಅಗ್ನಿಶಾಮಕ ವಸತಿ ಗೃಹದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.


ಅಗ್ನಿಶಾಮಕ ಸಿಬ್ಬಂದಿ ಮಹದೇವ್ ಎಂಬುವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಎಂದಿನಂತೆ ಬೆಳಗ್ಗೆ ಹಾಲು ಕಾಯಿಸಲು ಹೋದಾಗ ಇದ್ದಕ್ಕಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದೆ. ಮೈಸೂರಿನ ಎನ್‌.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಇದನ್ನೂ ಓದಿ: ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ..! 


https://bit.ly/3hDyh4G


Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.