ದಿಯೋಘರ್ (ಜಾರ್ಖಂಡ್): ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಪ್ರಾಪ್ತೆಯ ಮೇಲೆ ಆಕೆಯ ತಾಯಿಯ ಎದುರೇ ಐದು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಈ ಸಂಬಂಧ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ದಿಯೋಘರ್ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ; ಕೇಂದ್ರದ ಮೇಲೆ ಎಚ್ಡಿಕೆ ಕಿಡಿ
ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ದಾಳಿಗೆ ಒಳಗಾದರು ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್ ಅನ್ನು ಉಲ್ಲೇಖಿಸಿ ತಿಳಿಸಿದ್ದಾರೆ.
ಆಕೆಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ, ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರು ಅವರಿಬ್ಬರ ದಾರಿಗೆ ಅಡ್ಡಗಟ್ಟಿದರು ಮತ್ತು ನಂತರ ಅವರ ಮಗಳನ್ನು ಬಲವಂತವಾಗಿ ಪಕ್ಕಕ್ಕೆ ಕರೆದೊಯ್ದರು.
ಇದನ್ನೂ ಓದಿ : Gandhada Gudi ಪ್ರಿರಿಲೀಸ್ ಇವೆಂಟ್‌ಗೆ ಸಿಎಂಗೆ ಆಹ್ವಾನಿಸಿದ ಅಶ್ವಿನಿ ಪುನೀತ್ ರಾಜಕುಮಾರ್
ತಾಯಿ ತಡೆಯಲು ಮುಂದಾದಾಗ ಆಕೆಯನ್ನು ಥಳಿಸಿ ನಂತರ ಆಕೆಯ ಎದುರೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಿಯೋಘರ್ ಎಸ್ಪಿ ಸುಭಾಷ್ ಚಂದ್ರ ಜಾಟ್, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿಗಳನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ